
ಡಿಕೆ ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ CBI ದಾ#ಳಿ; ಡಿಕೆಶಿ ಈ ಬಗ್ಗೆ ಹೇಳಿದ್ದೇನು...?
ಬೆಂಗಳೂರು(Headlines Kannada): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸೋಮವಾರ CBI ದಾ#ಳಿ ನಡೆಸಲಾಗಿದ್ದು, ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಮೇಲೆ CBI ಅಧಿಕಾರಿಗಳು ದಾ#ಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದು, ಇದೇ ಸಂದರ್ಭದಲ್ಲಿ ವೇಳೆ ಬೆಂಗಳೂರಿನಲ್ಲಿ CBI ದಾ#ಳಿ ನಡೆಸಿರುವುದು ಡಿಕೆಶಿಗೆ ಶಾಕ್ ನೀಡಿದೆ. CBI ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಅವರು ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಚೇರ್ಮನ್ ಆಗಿದ್ದು, ಅವರ ಪುತ್ರಿ ಐಶ್ವರ್ಯ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಕಾರ್ಯದರ್ಶಿಯಾಗಿದ್ದಾರೆ.
ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಈ ಹಿಂದೆ ED, ಆದಾಯ ತೆರಿಗೆ ಅಧಿಕಾರಿಗಳು, CBI ಅಧಿಕಾರಿಗಳು ದಾ#ಳಿ ನಡೆಸಿದ್ದು, ಅದು ವಿಚಾರಣೆಯಲ್ಲಿದೆ.
CBI ದಾ#ಳಿ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, 'ನಮ್ಮ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾ#ಳಿ ನಡೆಸಿದ್ದು, ಈ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ನಮ್ಮ ಜಮೀನು, ವ್ಯವಹಾರದ ಸಂಬಂಧ ತನಿಖೆ ಮಾಡಿದ್ದಾರೆ. ನಮ್ಮ ಕುಟುಂಬಕ್ಕೆ ತನಿಖಾ ಸಂಸ್ಥೆಗಳಿಂದ ನಿರಂತರ ಕಿರುಕುಳ ನೀಡಲಾಗುತ್ತಿದೆ. ನಮ್ಮ ವಿರುದ್ಧ ಎಲ್ಲಾ ತನಿಖಾ ಸಂಸ್ಥೆಗಳು ದೂರು ದಾಖಲಿಸಿ ತನಿಖೆ ನಡೆಸುತ್ತಿವೆ. ಈ ವರೆಗೆ ನಾನು ಯಾವುದೇ ತಪ್ಪು ಮಾಡಿಲ್ಲ, ಹಾಗಾಗಿ ಭಯಪಡುವುದಿಲ್ಲ ಎಂದಿದ್ದಾರೆ.
ಬಿಜೆಪಿಯ H.ವಿಶ್ವನಾಥ್ ಅವರು ಹಣಕಾಸಿನ ಬಗ್ಗೆ ರಾಜರೋಷವಾಗಿ ಹೇಳಿದ್ದರು ಕೂಡ ಯಾರು ಈ ಬಗ್ಗೆ ಮಾತನಾಡಿಲ್ಲ. ಇದಲ್ಲದೇ ವಿರೋಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ BJP ಮುಂದಾಗಿದ್ದು, ಈ ಎಲ್ಲವುಗಳ ವಿರುದ್ಧ ನ್ಯಾಯಾಲಯ, ಜನರ ಜೊತೆಗೆ ನಾವು ಹೋಗುತ್ತೆವೆ ಎಂದು ಹೇಳಿದರು.