ಮುಂದಿನ ವರ್ಷದ ಏಪ್ರಿಲ್ 1ರಿಂದ ಈ ರಾಜ್ಯದಲ್ಲಿ ಸಿಗಲಿದೆ ಕೇವಲ 500 ರೂ.ಗೆ ಎಲ್‌ಪಿಜಿ ಸಿಲಿಂಡರ್‌ ! ಜನರಿಗೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿ

ಮುಂದಿನ ವರ್ಷದ ಏಪ್ರಿಲ್ 1ರಿಂದ ಈ ರಾಜ್ಯದಲ್ಲಿ ಸಿಗಲಿದೆ ಕೇವಲ 500 ರೂ.ಗೆ ಎಲ್‌ಪಿಜಿ ಸಿಲಿಂಡರ್‌ ! ಜನರಿಗೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿಜೈಪುರ(Headlines Kannada): ಮುಂದಿನ ವರ್ಷ ಏಪ್ರಿಲ್ 1 ರಿಂದ  BPL  ಕುಟುಂಬಗಳಿಗೆ ತಲಾ 500 ರೂಪಾಯಿಯಂತೆ ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ ನೀಡುವುದಾಗಿ ರಾಜಸ್ಥಾನ ಸರ್ಕಾರ ಘೋಷಣೆ ಮಾಡಿದೆ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಕೇವಲ 500 ರೂ.ಗೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭರವಸೆ ನೀಡಿದ್ದಾರೆ. 

ದೇಶದಲ್ಲಿ ಬೆಲೆ ಏರಿಕೆ ವಿಷಯ ಗಂಭೀರವಾಗಿದೆ. ತಮ್ಮ ರಾಜ್ಯದಲ್ಲಿ ಯಾರೂ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ವಂಚಿತರಾಗಬಾರದು. ಬಡತನ ರೇಖೆಗಿಂತ ಕೆಳಗಿರುವ ಹಾಗು ಉಜ್ವಲ ಯೋಜನೆಗೆ ಅಡಿಯಲ್ಲಿ ಅಡುಗೆ ಅನಿಲ ಪಡೆಯುತ್ತಿರುವ ಜನರಿಗೆ ರಾಜಸ್ಥಾನ ಸರ್ಕಾರ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಿತರಿಸಲಿದೆ  ಎಂದು ಅಲ್ವಾರ್ನಲ್ಲಿ ಗೆಹ್ಲೋಟ್ ಹೇಳಿದ್ದಾರೆ.

ಜನವರಿಯಲ್ಲಿ ನಾನು ಬಜೆಟ್‌ಗೆ ಸಿದ್ಧತೆ ನಡೆಸುತ್ತಿದ್ದೇನೆ. ಈ ಸಮಯದಲ್ಲಿ ರಾಜ್ಯದ ಜನತೆಗೆ ಈ ಕೊಡುಗೆ ನೀಡಲಿದ್ದೇನೆ. ಉಜ್ವಲ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗೆ LPG ಸಂಪರ್ಕಗಳನ್ನು ನೀಡಿದರು. ಆದರೆ ಈಗ ಆ LPG ಸಿಲಿಂಡರ್ ಖಾಲಿಯಾಗಿದೆ, ಏಕೆಂದರೆ ಸಿಲಿಂಡರ್ ದರಗಳು ಈಗ 400ರಿಂದ 1,040 ರೂ.ಗೆ ಹೆಚ್ಚಾಗಿದೆ ಎಂದು ಗೆಹ್ಲೋಟ್ ಕೇಂದ್ರದ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Ads on article

Advertise in articles 1

advertising articles 2

Advertise under the article