ಮುಂಬೈ, ,(Headlines Kannada): ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಮತ್ತೆ ತೆರೆಯ ಮೇಲೆ ಬರಲು ಭರ್ಜರಿ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. 2023ರಲ್ಲಿ ಅವರ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗಲು ಕಾಯುತ್ತಿದೆ.
ಕಿಂಗ್ ಖಾನ್ ನಟನೆಯ ‘ಪಠಾಣ್’ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇಟ್ಟಿದ್ದು, ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಕೂಡ ನಟಿಸಿರುವುದರಿಂದ ಇನ್ನಷ್ಟು ನಿರೀಕ್ಷೆ ಮೂಡಿಸಿದೆ.
2023ರ ಜನವರಿ 25ರಂದು ಶಾರುಖ್ ಖಾನ್ ‘ಪಠಾಣ್’ ರಿಲೀಸ್ ಆಗಲಿದ್ದು, ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಮೂಡಿಬಂದಿದೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಈ ಚಿತ್ರಕ್ಕೆ ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆ ಬಂಡವಾಳ ಹೂಡಿದ್ದು, 8 ದೇಶಗಳಲ್ಲಿ ಈ ಸಿನಿಮಾದ ಅದ್ದೂರಿಯ ಶೂಟಿಂಗ್ ನಡೆದಿದೆ. ಈಗಾಗಲೇ ‘ಪಠಾಣ್’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್ ಖಾನ್ ಅವರು ಸಿಕ್ಸ್ ಪ್ಯಾಕ್ ಮಾಡಿಕೊಂಡಿದ್ದು, ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
.jpeg)