JDSಗೆ ಗುಡ್ ಬೈ; 'ಕೈ'ಹಿಡಿದ YSV ದತ್ತ: ಶೀಘ್ರವೇ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು(Headlines Kannada): ಜೆಡಿಎಸ್ ನಾಯಕ ವೈ ಎಸ್ ವಿ ದತ್ತ ಜೆಡಿಎಸ್ ತೊರೆಡಿದ್ದು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಭವಿಷ್ಯ ಮಂಕಾಗಿದ್ದು, ಕಾರ್ಯಕರ್ತರಿಗೆ ಬೇರೆ ಕಡೆ ವ್ಯವಸ್ಥೆ ಆಗಬೇಕು, ನನ್ನ ನಂಬಿಕೊಂಡ ಬೆಂಬಲಿಗರು, ಕಾರ್ಯಕರ್ತರ ಭವಿಷ್ಯಕ್ಕಾಗಿ, ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದರು.
ನನ್ನ ಹಾಗು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದುದ್ದು. ಅವರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ಅವರು ನನಗೆ ತಂದೆಯ ಸಮಾನರು, ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ದೇವೇಗೌಡರಿಗೆ ಈ ವಿಚಾರ ಹೇಳಲು ಹೋಗಿ ವಾಪಸ್ ಬಂದಿದ್ದೇನೆ. ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಹೋರಾಡಬೇಕೆಂದರೆ ಕಾಂಗ್ರೆಸ್ ಸೇರಬೇಕು ಎಂಬುದು ನಮ್ಮ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರ ಒತ್ತಾಯವಾಗಿದೆ ಎಂದು ತಿಳಿಸಿದರು.