
ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ನಟ ದರ್ಶನ್ ಮೇಲೆ ಚ#ಪ್ಪಲಿ ಎಸೆದ ದು#ಷ್ಕರ್ಮಿ; ವಿಡಿಯೋ ವೈರಲ್!
ಬೆಂಗಳೂರು (Headlines Kannada): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕ್ರಾಂತಿ' ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಈ ಮಧ್ಯೆ ಇಂದು ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ದರ್ಶನ್ ಮೇಲೆ ದು#ಷ್ಕರ್ಮಿಗಳು ಚಪ್ಪಲಿ ಎಸೆದಿರುವ ಘಟನೆ ನಡೆದಿದೆ.
'ಕ್ರಾಂತಿ' ಚಿತ್ರ ಬರುವ ತಿಂಗಳ ಜನವರಿಯಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಸಖತ್ ಬ್ಯುಸಿಯಾಗಿದೆ. ಕಾಂತ್ರಿ ಚಿತ್ರದ 2ನೇ ಹಾಡು 'ಬೊಂಬೆ ಬೊಂಬೆ'ಯನ್ನು ಬಳ್ಳಾರಿಯ ಹೊಸಪೇಟೆ ಪಟ್ಟಣದ ಡ್ಯಾಮ್ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ಥದಲ್ಲಿ ಬಿಡುಗಡೆ ಮಾಡಲಾಯಿತು. ಇದಕ್ಕೂ ಮುನ್ನ ಹೊಸಪೇಟೆಯಲ್ಲಿ ಪುನೀತ್ ರಾಜಕುಮಾರ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ವಾರ್ ಶುರುವಾಗಿತ್ತು.
ದರ್ಶನ್ ಅಭಿನಯದ 'ಕಾಂತ್ರಿ' ಚಿತ್ರದ ಪೋಸ್ಟರ್ ಗಳನ್ನು ಅಪ್ಪು ಅಭಿಮಾನಿಗಳು ಹರಿದುಹಾಕಿದ್ದಲ್ಲದೆ ಅಪ್ಪು ಕಟ್ ಔಟ್ ಹಿಡಿದು ಅಪ್ಪುಗೆ ಜೈಕಾರ ಹಾಕಿ ವೇದಿಕೆ ಏರಿದ್ದರು. ಇದೆ ಸಂದರ್ಭದಲ್ಲಿ ದರ್ಶನ್ ಅಪ್ಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಕಾರ್ಯಕ್ರಮದ ವೇದಿಕೆ ಮೇಲೆ ರಚಿತಾ ರಾಮ್ ಚಿತ್ರದ ಕುರಿತು ಮಾತನಾಡುತ್ತಿದ್ದಾಗ ಯಾರೋ ಕಿ#ಡಿ#ಗೇಡಿ ದರ್ಶನ್ ಮೇಲೆ ಚ#ಪ್ಪಲಿ ಎ#ಸೆದಿದ್ದಾನೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಸೋಷಲ್ ಮೀಡಿಯಾದಲ್ಲಿ ಈ ದೃಶ್ಯ ವೈರಲ್ ಆಗಿದೆ.