ಅಲೆವೂರು ಶಾಂತಿ ನಿಕೇತನ ಶಾಲಾ ವಾರ್ಷಿಕೋತ್ಸವದಲ್ಲಿ ಪ್ರತಿಷ್ಠಿತ 'ಅಲೆವೂರು ಗ್ರೂಪ್ ಅವಾರ್ಡ್' ಡಾ. ಶಶಿಕಿರಣ್ ಉಮಾಕಾಂತ್'ಗೆ ಪ್ರದಾನ
ಉಡುಪಿ(Headlines Kannada): ಅಲೆವೂರು ಗ್ರೂಪ್ ಫಾರ್ ಎಜ್ಯುಕೇಶನ್ ವತಿಯಿಂದ ನೀಡಲಾಗುವ 2022ನೇ ಸಾಲಿನ ಪ್ರತಿಷ್ಠಿತ 'ಅಲೆವೂರು ಗ್ರೂಪ್ ಅವಾರ್ಡ್'ಅನ್ನು ಉಡುಪಿ ಡಾ.ಟಿ.ಎಂ.ಎ. ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ಅವರಿಗೆ ಪ್ರದಾನ ಮಾಡಲಾಯಿತು.
ಅಲೆವೂರು ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಶಶಿಕಿರಣ್ ಅವರು, ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಸಾರ್ವಜನಿಕರ ಸಹಕಾರದೊಂದಿಗೆ ವೈದ್ಯಕೀಯ ಕ್ಷೇತ್ರ ಸಮರ್ಥವಾಗಿ ಎದುರಿಸಿದೆ. ಇದೀಗ ಮತ್ತೆ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಈ ಬಗ್ಗೆ ಆತಂಕ ಬೇಡ. ಭಾರತದಲ್ಲಿ ಶೇ. 90ಲಸಿಕೆ ಪೂರ್ಣವಾಗಿದ್ದು, ಮುನ್ನಚ್ಚೆರಿಕಾ ಕ್ರಮ ತೆಗೆದುಕೊಳ್ಳುವುದು ಅಗತ್ಯ ಎಂದರು.
ಹಿರಿಯ ಪತ್ರಕರ್ತ ಯು.ಕೆ. ಕುಮಾರನಾಥ್ ಹಾಗೂ ಲಯನ್ಸ್ 317 ಸಿ ಜಿಲ್ಲಾ ಮಾಜಿ ಗವರ್ನರ್ ಎನ್.ಎಂ. ಹೆಗ್ಡೆ ಮಾತನಾಡಿದರು. ಅಲೆವೂರು ಗ್ರೂಪ್ ಫಾರ್ ಎಜುಕೇಶನ್ ಅಧ್ಯಕ್ಷ ಎ. ಗಣಪತಿ ಕಿಣಿ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ಅಲೆವೂರು ದಿನೇಶ್ ಕಿಣಿ ಸ್ವಾಗತಿಸಿದರು. ಕೋಶಾಧಿಕಾರಿ ಹರೀಶ್ ಕಿಣಿ ಸನ್ಮಾನಿತರ ಪರಿಚಯ ಮಾಡಿದರು. ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲೆ ರೂಪಾ ಡಿ. ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.