ಮಂಡ್ಯದ ಗೆಜ್ಜಲಗೆರೆಯಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಮೆಗಾ ಡೈರಿ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಡ್ಯದ ಗೆಜ್ಜಲಗೆರೆಯಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಮೆಗಾ ಡೈರಿ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ


ಮಂಡ್ಯ(Headlines Kannada): ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶುಕ್ರವಾರ ಮಂಡ್ಯದ ಗೆಜ್ಜಲಗೆರೆಯಲ್ಲಿರುವ ಮೆಗಾ ಡೈರಿ ಉದ್ಘಾಟಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.  

ಮಂಡ್ಯದ ಮದ್ದೂರಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮೆಗಾ ಡೈರಿ, 47 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿದ್ದು, ಸುಮಾರು 260.9 ಕೋಟಿ ರೂ.ವೆಚ್ಚದ ಹಾಲು ಉತ್ಪಾದಕ ಘಟಕವಾಗಿದೆ. 1 ದಿನಕ್ಕೆ 30 ಮೆಟ್ರಿಕ್ ಟನ್ ಹಾಲಿನ ಪೌಡರ್, 4 ಮೆಟ್ರಿಕ್ ಟನ್ ಕೋವಾ, 2 ಮೆಟ್ರಿಕ್ ಟನ್ ಪನ್ನೀರ್, 12 ಮೆಟ್ರಿಕ್ ಟನ್ ತುಪ್ಪ, 10 ಮೆಟ್ರಿಕ್ ಟನ್ ಬೆಣ್ಣೆ ಹಾಗು 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೆಗಾ ಡೈರಿಯಿಂದ 1 ವರ್ಷಕ್ಕೆ 6 ಕೋಟಿ ಹಣ ಉಳಿತಾಯವಾಗಲಿದೆ. 

ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀ ಸಾನಿಧ್ಯ ವಹಿಸಿದ್ದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಎಸ್​.ಟಿ. ಸೋಮಶೇಖರ್​​​ ಸೇರಿದಂತೆ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್​ ಮತ್ತಿತರರು ಭಾಗಿಯಾಗಿದ್ದರು.

Ads on article

Advertise in articles 1

advertising articles 2

Advertise under the article