ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ರಾಜಧಾನಿಯಾಗಲಿದೆ: ಸಚಿವ ಆನಂದ್ ಸಿಂಗ್
Friday, December 16, 2022
ವಿಜಯನಗರ(Headlines Kannada): ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಪ್ರತಿಧ್ವನಿಸಿದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಅದಕ್ಕೆ ವಿಜಯನಗರ ರಾಜಧಾನಿಯನ್ನಾಗಿ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ಟರಳ್ಳಿ ಗ್ರಾಮದ ಆಂಜನೇಯ ದೇಗುಲದ ಬಳಿ ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಆನಂದ್ ಸಿಂಗ್, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಿದರೆ ವಿಜಯನಗರ ಜಿಲ್ಲೆ ರಾಜಧಾನಿಯನ್ನಾಗಿ ಮಾಡಲಾಗುವುದು ಎಂದಿದ್ದಾರೆ.
ಉಮೇಶ್ ಕತ್ತಿ ಅವರು ಕೂಡ ಈ ಹಿಂದೆ ಹಲವು ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ್ದರು. ಉಮೇಶ್ ಕತ್ತಿ ಅವರ ಬಳಿಕ ಈಗ ಆನಂದ್ ಸಿಂಗ್ ಅವರು ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಪರ ಧ್ವನಿ ಎತ್ತಿರುವುದು ಮಹತ್ವವನ್ನು ಪಡೆದುಕೊನಿಡಿದೆ.