ಕರ್ನಾಟಕದ 8 ಜಿಲ್ಲೆಗಳಿಗೆ ಒಂದರಂತೆ ಕ್ರೀಡಾ ವಿಜ್ಞಾನ ಕೇಂದ್ರ ತೆರೆಯಲು ಅನುಮತಿ: ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್
ಉಡುಪಿ (Headlines Kannada): ಕರ್ನಾಟಕದಲ್ಲಿ 8 ಜಿಲ್ಲೆಗಳಿಗೆ ಒಂದರಂತೆ ಕ್ರೀಡಾ ವಿಜ್ಞಾನ ಕೇಂದ್ರ ತೆರೆಯಲು ಅನುಮತಿ ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಿಸಿರುವ ವಿಜ್ಞಾನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕರ್ನಾಟಕ ಸರ್ಕಾರ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಎಲ್ಲಾ ರೀತಿಯ ಅಗತ್ಯ ನೆರವು ನೀಡಲಾಗುವುದು ಎಂದು ದೇಶದಲ್ಲಿ ವಿಶ್ವದ ಅತ್ಯತ್ತಮ ಕ್ರೀಡಾಪಟುಗಳು ರೂಪುಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ವ್ಯಜ್ಞಾನಿಕ ತರಬೇತಿ ನೀಡಲಾಗುತ್ತಿದ್ದು ,ಇದಕ್ಕಾಗಿ ಪತಿಭಾವಂತ ಕ್ರೀಡಾಪಟುಗಳ ಆಯ್ಕೆ ಮಾಡಲಾಗುತ್ತಿದ್ದು, ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರ ಕ್ಕೆ ಹಿಂದೆಗಿಂತಲು ಅತಿ ಹೆಚ್ಜಿನ ಹಣ ಮೀಸಲಿರಿಸಲಾಗಿದೆ. ಉಡುಪಿಯಲ್ಲಿ ಎಫ್.ಎಂ. ಕೇಂದ್ರ ಆರಂಭ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದರು.