ಪ್ರಧಾನಿ ಮೋದಿ ಹ#ತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ರಾಜಾ ಪಟೇರಿಯಾ ಬಂಧನ

ಪ್ರಧಾನಿ ಮೋದಿ ಹ#ತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ರಾಜಾ ಪಟೇರಿಯಾ ಬಂಧನ



ಭೋಪಾಲ್‌(Headlines Kannada): ದೇಶದ ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಅವರನ್ನು ಹ#ತ್ಯೆ ಮಾಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಪಟೇರಿಯಾ ಅವರು, “ಸಂವಿಧಾನವನ್ನು ಉಳಿಸಲು ಪಿಎಂ ಮೋದಿಯನ್ನು ಹ#ತ್ಯೆ ಮಾಡಲು ಸಜ್ಜಾಗಿ” ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪಟೇರಿಯಾ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಮಧ್ಯಪ್ರದೇಶ ಸರ್ಕಾರವು ಮಾಜಿ ಸಚಿವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಆದೇಶಿಸಿತ್ತು. 

ಈ ಸಂಬಂಧ ಪನ್ನಾದ ಪಾವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಕಾಂಗ್ರೆಸ್‌ ನಾಯಕ ಪಟೇರಿಯಾ ಹೇಳಿಕೆಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಖಂಡನೆ ವ್ಯಕ್ತಪಡಿಸಿದ್ದು, “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಇದರಿಂದ ಹೊರಬಂದಿದೆ” ಎಂದು ರಾಹುಲ್‌ ಗಾಂಧಿಯನ್ನು ಗುರಿಯಾಗಿಸಿ ಟೀಕೆ ವ್ಯಕ್ತಪಡಿಸಿದ್ದರು. 

ಸಭೆಯೊಂದರಲ್ಲಿ ಪಟೇರಿಯಾ ಮಾತನಾಡಿದ್ದ ವೀಡಿಯೋವೊಂದು ಸೋಷಿಯಲ್ ಜಾಲತಾಣದಲ್ಲಿ ವೈರಲ್‌ ಆಗಿತ್ತು. 'ಮೋದಿ ಅವರು ಚುನಾವಣೆಗೆ ಅಂತ್ಯ ಕಾಣಿಸುತ್ತಾರೆ, ಧರ್ಮ, ಜಾತಿ ಮತ್ತು ಭಾಷೆ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತಿದ್ದಾರೆ. ಇದರಿಂದಾಗಿ ದಲಿತರು, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಭವಿಷ್ಯ ಅಪಾಯದಲ್ಲಿದೆ. ನೀವು ಸಂವಿಧಾನವನ್ನು ಉಳಿಸಲು ಬಯಸುವವರಾದರೆ ಮೋದಿ ಹ#ತ್ಯೆಗೆ ಸಿದ್ಧರಾಗಿ. ಮೋದಿ ಅವರನ್ನು ಸೋಲಿಸುವ ಭಾವನೆಯೊಂದಿಗೆ ಹ#ತ್ಯೆ ಮಾಡಿ' ಎಂದು ಪಟೇರಿಯಾ ಪನ್ನಾ ಜಿಲ್ಲೆಯ ಪವೈಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದರು.

ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ಮಾಜಿ ಸಚಿವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ನಂತರ ಇದಕ್ಕೆ ಸ್ಪಷ್ಟನೆ ನೀಡಿದ್ದ ಪಟೇರಿಯಾ, “ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಗಾಂಧಿಯನ್ನು ನಂಬುವ ವ್ಯಕ್ತಿ, ಈ ರೀತಿ ಮಾತನಾಡಲಾರೆ. ಸಂವಿಧಾನ (Constitution Of India) ಉಳಿಸಲು ಮೋದಿ ಅವರನ್ನು ಸೋಲಿಸಬೇಕು ಅನ್ನೋ ಅರ್ಥದಲ್ಲಿ ಮಾತನಾಡಿದ್ದೇನೆ” ಎಂದು ತಿಳಿಸಿದ್ದರು.

Ads on article

Advertise in articles 1

advertising articles 2

Advertise under the article