ಕೋವಿಡ್ ಹೆಚ್ಚಳ ಭೀ#ತಿ; ಬೆಂಗಳೂರು ಏರ್‌ಪೋರ್ಟ್‌ಗೆ ಬರುವ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ

ಕೋವಿಡ್ ಹೆಚ್ಚಳ ಭೀ#ತಿ; ಬೆಂಗಳೂರು ಏರ್‌ಪೋರ್ಟ್‌ಗೆ ಬರುವ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು (Headlines Kannada): ಚೀನಾ ಸೇರಿ ಹಲವು ದೇಶಗಳಲ್ಲಿ ಕೋವಿಡ್ ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಬೆಂಗಳೂರು ಏರ್‌ಪೋರ್ಟ್‌ಗೆ ಬೇರೆ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕೆಲವು ಮುನ್ನೆಚ್ಚರಿಕೆ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ. 

ಮಾರ್ಗಸೂಚಿಯಲ್ಲಿ ಹೀಗಿದೆ: 

ಬೆಂಗಳೂರು ಏರ್‌ಪೋರ್ಟ್‌ಗೆ ಬರುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ಶೇ. 2ರಷ್ಟು ಪ್ರಯಾಣಿಕರಿಗೆ ರ‍್ಯಾಂಡಮ್ ಕೋವಿಡ್‌ ಟೆಸ್ಟ್ (ಗಂಟಲು ದ್ರವ ನೀಡಿ ವಿಮಾನ ನಿಲ್ದಾಣದಿಂದ ಹೊರಗೆ ಬರತಕ್ಕದ್ದು) ಮಾಡಲಾಗಿದೆ. ಈ ವೇಳೆ ರೋಗ ಲಕ್ಷಣಗಳು ಕಂಡುಬರುವ ಪ್ರಯಾಣಿಕರು ತತ್‌ಕ್ಷಣ ಐಸೋಲೇಷನ್ ಆಗಬೇಕು. ಪ್ರಯಾಣಿಕರೊಂದಿಗೆ ಬರುವ 12 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಅಲ್ಲ. ಒಂದು ವೇಳೆ ರೋಗ ಗುಣ ಲಕ್ಷಣಗಳು ಇದ್ದರೆ ಮಾತ್ರ ಟೆಸ್ಟಿಂಗ್ ಮಾಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರು ಸ್ವಯಂ ನಿಗಾವಹಿಸಲು ಈ ವೇಳೆ ಸೂಚಿಸಲಾಗಿದೆ.


Ads on article

Advertise in articles 1

advertising articles 2

Advertise under the article