
ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣಕ್ಕೆ ಕಾಂಗ್ರೆಸ್ ವಿರೋಧ; ಪ್ರ#ತಿಭಟಿಸಿದ ಕಾಂಗ್ರೆಸ್ ನಾಯಕರು
ಸಾವರ್ಕರ್ ಫೋಟೋವನ್ನು ವಿಧಾನಸಭೆಯಲ್ಲಿ ಅನಾವರಣಗೊಳಿಸಿದ್ದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ, ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಪ್ರ#ತಿಭಟನೆ ನಡೆಸಿದೆ.
KPCC ಅಧ್ಯಕ್ಷ ಡಿಕೆ.ಶಿವಕುಮಾರ್ ಮಾತನಾಡಿ, ಸಾವರ್ಕರ್ ಫೋಟೋ ಅನಾವರಣಗೊಳಿಸಿರುವುದನ್ನು ನೋಡಿದರೆ ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪ ಅಡ್ಡಿಪಡಿಸಲೆಂದೇ ಬಿಜೆಪಿಯವರು ಬಯಸುತ್ತಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಸಾಕಷ್ಟು ಭ್ರ#ಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಬಿಜೆಪಿ ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ, ಅದಕ್ಕಾಗಿಯೇ ಈ ಫೋಟೋ ಅನಾವರಣಗೊಳಿಸಿದ್ದಾರೆ ಎಂದು ಎಂದು ಕಿಡಿಕಾರಿದ್ದಾರೆ.
ಸಾವರ್ಕರ್ ಭಾವಚಿತ್ರ ಹಾಕಿರುವುದಕ್ಕೆ ವಿ#ರೋಧ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ. ನಾವು ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ, ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನವನ್ನು ಡೈವರ್ಟ್ ಮಾಡಲು ಫೋಟೋ ವಿವಾದ ಮುನ್ನಲೆಗೆ ತಂದಿದ್ದಾರೆ ಎಂದರು.