
ಅವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಕ್ಕೆ ಕುಂದಾಪುರ ಬಿಲ್ಲವ ಸಂಘದ ಪದಾಧಿಕಾರಿಗಳಿಂದ ಬೆ#ದರಿಕೆ: ರಾಧಾದಾಸ್ ಆರೋಪ
Saturday, December 17, 2022
ಉಡುಪಿ (Headlines Kannada): ಕುಂದಾಪುರ ಬಿಲ್ಲವ ಸಂಘದ ಅವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಂಘದ ಪದಾಧಿಕಾರಿಗಳು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಬೆ#ದರಿಕೆ ಹಾಕುತ್ತಿದ್ದಾರೆ ಎಂದು ಮೂಕಾಂಬಿಕಾ ಮಹಿಳಾ ಮಂಡಲಗಳ ತಾಲೂಕು ಒಕ್ಕೂಟದ ಅಧ್ಯಕ್ಷೆ ರಾಧಾದಾಸ್ ಆರೋಪಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು 28 ವರ್ಷಗಳಿಂದ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಸದಸ್ಯೆಯಾಗಿದ್ದೇನೆ. ಇತ್ತೀಚೆಗೆ ಸಂಘದಲ್ಲಿ ಲೆಕ್ಕಪತ್ರ, ನೂತನ ಸದಸ್ಯರ ಆಯ್ಕೆ ಎಲ್ಲವು ಬೈಲಾ ಪ್ರಕಾರ ನಡೆಯದೇ ಕೆಲವರು ಸ್ವಾರ್ಥ ಸಾಧನೆಗಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸಿದಾಗ ನನ್ನ ಬಗ್ಗೆ ಸುಳ್ಳು ಆರೋಪ ಮಾಡಿ ಬೆ#ದರಿಸಿ, ನಿಂದಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದೇನೆ ಎಂದು ತಿಳಿಸಿದರು.