ಭಾರತದ ಮೇಲೆ ಚೀನಾ ದಾ#ಳಿಗೆ ತಯಾರಿ; ನಮ್ಮ ಯೋಧರಿಗೆ ಬೀಳುತ್ತಿದೆ ಪೆಟ್ಟು: ಸರ್ಕಾರ ನಿದ್ದೆ ಮಾಡುತ್ತಿದೆ: ರಾಹುಲ್ ಕಿಡಿ
ನವದೆಹಲಿ(Headlines Kannada): ಲಡಾಖ್ ಹಾಗು ಅರುಣಾಚಲ ಪ್ರದೇಶದಲ್ಲಿ ಚೀನಾವು ಭಾರತದ ಮೇಲೆ ದಾ#ಳಿಗೆ ತಯಾರಿ ನಡೆಸುತ್ತಿದ್ದಾರೆ, ಇತ್ತ ಭಾರತ ಸರ್ಕಾರ ನಿದ್ದೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, 'ಚೀನಾ ದೇಶವು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದರೆ, ಇತ್ತ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅದನ್ನು ಒಪ್ಪಿಕೊಳ್ಳುತ್ತಿಲ್ಲಎಂದಿದ್ದಾರೆ.
ಚೀನಾ ಯುದ್ಧಕ್ಕೆ ತಯಾರಾಗಿ ನಿಂತಿದ್ದು, ಅತಿಕ್ರಮಣಕ್ಕಲ್ಲ, ಚೀನಾದ ಅಸ್ತ್ರಗಳ ಮಾದರಿ ನೋಡಿ್ದರೆ ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದರೆ ಇಂಥ ಪರಿಸ್ಥಿತಿಯಲ್ಲೂ ಇದನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ದೂರಿದರು.
ಚೀನಾ ನಮ್ಮ ದೇಶದ ಭೂಮಿಯನ್ನು ವಶಪಡಿಸಿಕೊಂಡಿದ್ದು, ಜೊತೆಗೆ ಚೀನಿ ಯೋಧರು ನಮ್ಮ ಯೋಧರಿಗೆ ಹೊ#ಡೆಯುತ್ತಿದ್ದಾರೆ. ಈ ರೀತಿ ಚೀನಾ ನಮ್ಮನ್ನು ಬೆ#ದರಿಸುತ್ತಿದ್ದರೂ ಕೇಂದ್ರ ಸರ್ಕಾರ ಅದನ್ನು ನಿರ್ಲಕ್ಷಿಸುತ್ತಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದರು.