10 ಅಡಿ ಉದ್ದದ ಸುರಂಗ ಕೊರೆದು ಬ್ಯಾಂಕಿಗೆ ನು#ಗ್ಗಿದ ಕ#ಳ್ಳರು; 1 ಕೋಟಿ ರೂ.ಮೌಲ್ಯದ ಚಿನ್ನಾಭರಣ ಕ#ಳವು !
ಲಕ್ನೋ(Headlines Kannada): ಸುಮಾರು 10 ಅಡಿ ಉದ್ದದ ಸುರಂಗ ಕೊರೆದು ಬ್ಯಾಂಕ್‍ನಲ್ಲಿದ್ದ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದೋ#ಚಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಉತ್ತರಪ್ರದೇಶದ ಕಾನ್ಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಾನುತಿ ಶಾಖೆಯ ಪಕ್ಕದಲ್ಲಿರುವ ಖಾಲಿ ಜಾಗದಿಂದ ಕ#ಳ್ಳರು 4 ಅಡಿ ಅಗಲದ ಸುರಂಗವನ್ನು ಅಗೆದಿದ್ದಾರೆ. ನಂತರ 10 ಅಡಿ ಉದ್ದದ ಸುರಂಗದ ಮೂಲಕ ಬ್ಯಾಂಕ್‍ನ ವಾಲ್ಟ್‌ಗೆ ನು#ಗ್ಗಿದ್ದಾರೆ. ಬ್ಯಾಂಕ್‍ನೊಳಗಿದ್ದ 1.8 ಕೆಜಿಗಿಂತಲೂ ಹೆಚ್ಚು ತೂಕವಿದ್ದ 1 ಕೋಟಿ ಮೌಲ್ಯದ ಚಿನ್ನದ ಪೆಟ್ಟಿಗೆಯನ್ನು ತೆರೆದು ದೋ#ಚಿದ್ದಾರೆ. ಈ ವೇಳೆ ಕ#ಳ್ಳರಿಗೆ 32 ಲಕ್ಷ ರೂ. ನಗದು ಪೆಟ್ಟಿಗೆಯನ್ನು ತೆರೆಯಲು ಸಾಧ್ಯವಾಗದಿದ್ದರಿಂದ ಅದನ್ನು ಹಾಗೇ ಅಲ್ಲಿಟ್ಟು ಪರಾರಿಯಾಗಿದ್ದಾರೆ.
ಬ್ಯಾಂಕ್ ಅಧಿಕಾರಿಗಳು-ಸಿಬ್ಬಂದಿಗಳು ಬ್ಯಾಂಕ್‍ಗೆ ಬಂದಾಗ ಈ ಘಟನೆ ಬೆಳೆಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬ್ಯಾಂಕಿನ ಸಂಪೂರ್ಣ ನಕ್ಷೆಯ ಬಗ್ಗೆ ತಿಳಿದಿರುವ ಚಿರಪರಿಚಿತರಿರುವರೇ ಈ ಕ#ಳ್ಳತನ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.