ಹೊಸ ವರ್ಷಾಚರಣೆ; ಯಾವುದೇ ಅ#ಹಿತಕರ ಘಟನೆಗಳು ನಡೆಯದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ  SP ಅಕ್ಷಯ್ ಮಚ್ಚೀಂದ್ರ ಸೂಚನೆ

ಹೊಸ ವರ್ಷಾಚರಣೆ; ಯಾವುದೇ ಅ#ಹಿತಕರ ಘಟನೆಗಳು ನಡೆಯದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ SP ಅಕ್ಷಯ್ ಮಚ್ಚೀಂದ್ರ ಸೂಚನೆ


ಉಡುಪಿ (Headlines Kannada): ಹೊಸ ವರ್ಷಾಚರಣೆಯ ಜಿಲ್ಲೆಯಲ್ಲಿ ಯಾವುದೇ ಅ#ಹಿತಕರ ಘಟನೆಗಳು ನಡೆಯದಂತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹೆಚ್ಚುವರಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಿಸಿ, ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.

ಡಿ.31ರ ಮಧ್ಯರಾತ್ರಿ 1 ಗಂಟೆಯೊಳಗೆ ಎಲ್ಲಾ ರೀತಿಯ ಹೊಸ ವರ್ಷಾಚರಣೆಯ ಕಾರ್ಯಕ್ರಮ ಮುಕ್ತಾಯವಾಗಬೇಕು. ಪ#ಬ್, ರೆಸ್ಟೋರೆಂಟ್, ಕ್ಲ#ಬ್, ರೆಸಾರ್ಟ್ ಮುಂತಾದ ಕಡೆಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಇರದಂತೆ ನೋಡಿಕೊಳ್ಳಬೇಕು. ಹೋಟೆಲ್ /ಪ#ಬ್/ರೆಸ್ಟೊರೆಂಟ್, ಹೋ#ಮ್‌ಸ್ಟೇ/ಪಿಜಿಗಳಲ್ಲಿ ಸಾರ್ವಜನಿರಿಗೆ ಈವೆಂಟ್ಸ್ ಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಬಸ್ ಸ್ಟಾಂಡ್, ಸಮುದ್ರ ತೀರ, ರಸ್ತೆ, ಫುಟ್ ಪಾತ್, ಗಾರ್ಡನ್ ಮತ್ತು ಇತರೇ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು. 

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅ#ಮಲು ಅಥವಾ ಮ#ದ್ಯದ ನ#ಶೆಯಲ್ಲಿ ಆಚರಣೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸಲಾಗುವುದು. ಅಲ್ಲದೆ, ರಾತ್ರಿ ಹೊತ್ತು ಕು#ಡಿದು ವಾಹನ ಚಾಲನೆ ಮತ್ತು ಅತೀವೇಗ/ನಿ#ರ್ಲಕ್ಷ್ಯತನದ ವಾಹನ ಚಾಲನೆ ನಡೆಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಎಸ್ಪಿ ಅಕ್ಷಯ್ ಮಚ್ಚೀಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article