ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಸುನಾಮಿಯಲ್ಲಿ ಕಾಂಗ್ರೆಸ್ ಕಣ್ಮರೆಯಾಗಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಸುನಾಮಿಯಲ್ಲಿ ಕಾಂಗ್ರೆಸ್ ಕಣ್ಮರೆಯಾಗಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತುಮಕೂರು(Headlines Kannada): ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಸುನಾಮಿಯಲ್ಲಿ ಕಾಂಗ್ರೆಸ್ ಕಣ್ಮರೆಯಾಗಲಿದ್ದು, ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತುಮಕೂರಿನ ಕೊರಟಗೆರೆಯಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಅಭಿವೃದ್ಧಿಗಳನ್ನು ನೋಡಿದರೆ ಬಿಜೆಪಿ ಪರ ಅಲೆ ಇದೆ ಎಂದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿತ್ತು. ಅರ್ಕಾವತಿ ಡಿನೋಟಿಫಿಕೇಶನ್, ಸರ್ಕಾರಿ ಹಾಸ್ಟೆಲ್‌ಗಳಿಗೆ ದಿಂಬು ಮತ್ತು ಹಾಸಿಗೆ ಖರೀದಿಯಲ್ಲಿ, ಎಸ್‌ಸಿ/ಎಸ್‌ಟಿಗಳಿಗೆ ಬೋರ್‌ವೆಲ್ ಕೊರೆಯುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. 

ಸಿದ್ದರಾಮಯ್ಯ ಅವರು ಲೋಕಾಯುಕ್ತ ವ್ಯವಸ್ಥೆಯನ್ನೇ ದುರ್ಬಲಗೊಳಿಸಿದರು. ತಮ್ಮ ಮತ್ತು ಇತರ 50 ಜನರ ವಿರುದ್ಧದ ಪ್ರಕರಣಗಳನ್ನು ಮುಚ್ಚಿಹಾಕಲು ಭ್ರಷ್ಟಾಚಾರ ನಿಗ್ರಹ ದಳವನ್ನು ಸ್ಥಾಪಿಸಿದರು ಎಂದು ಸಿಎಂ ದೂರಿದರು.ಅವರು ಮಾಡಿರುವ ಘನಕಾರ್ಯಗಳನ್ನು  ಮುಂದಿನ ದಿನಗಳಲ್ಲಿ ಬಿ ರಿಪೋರ್ಟ್ ಸಲ್ಲಿಸಿರುವ ಪ್ರಕರಣಗಳನ್ನು ಮತ್ತೆ ತೆರೆಯುತ್ತೇವೆ ಎಂದು ತಿಳಿಸಿದರು.


Ads on article

Advertise in articles 1

advertising articles 2

Advertise under the article