
ಹಿಮಾಚಲ ಪ್ರದೇಶದಲ್ಲಿ ಆಡಳಿತ ಚುಕ್ಕಾಣಿ 'ಕೈ'ಗೆ; ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿ; ಶಾಸಕರ ರಕ್ಷಣೆಗೆ ಮುಂದಾದ ಕಾಂಗ್ರೆಸ್!
Thursday, December 8, 2022
ಶಿಮ್ಲಾ(Headlines Kannada): ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದತ್ತ ದಾಪುಗಾಲು ಇಡುವಂತೆ ಇತ್ತ ಬಿಜೆಪಿಯಿಂದ ಶಾಸಕರ ಖರೀದಿಗೆ ಕುದುರೆ ವ್ಯಾಪಾರದ ಭೀತಿಯೂ ಕಾಡಿದೆ. ಇದಕ್ಕಾಗಿ ತನ್ನ ಶಾಸಕರನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮೂವರು ನಾಯಕರನ್ನು ಕಾಂಗ್ರೆಸ್ ನಿಯೋಜಿಸಿದೆ.
ಮೂಲಗಳ ಪ್ರಕಾರ ಆಡಳಿತಾರೂಢ ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿಯಿಂದ ಕಾಂಗ್ರೆಸ್ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪೇಂದರ್ ಹೂಡಾ, ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಅವರನ್ನು ಶಿಮ್ಲಾಕ್ಕೆ ಕಳುಹಿಸಿದೆ.