ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೋನಾ ಸೋಂಕು; 3 ದಿನಗಳಲ್ಲಿ ವಿದೇಶಗಳಿಂದ ಬಂದಿರುವ 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೋನಾ ಸೋಂಕು; 3 ದಿನಗಳಲ್ಲಿ ವಿದೇಶಗಳಿಂದ ಬಂದಿರುವ 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ



ಬೆಂಗಳೂರು(Headlines Kannada): ವಿದೇಶಗಳಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮತ್ತೆ ಎಲ್ಲ ರೀತಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಈ ಮಧ್ಯೆ ಚೀನಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಮತ್ತಷ್ಟು ಆ#ತಂಕವನ್ನು ಹೆಚ್ಚಿಸಿದೆ. 

ರವಿವಾರ ಚೀನಾದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ 35 ವರ್ಷದ ವ್ಯಕ್ತಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಪರೀಕ್ಷೆ ವೇಳೆ ಅವರಲ್ಲಿ ಕೊರೋನಾ‌ ಪಾಸಿಟಿವ್ ಇರುವುದು ಕಂಡು ಬಂದಿದೆ ಎಂದು ಹೇಳಲಾಗಿದೆ.

ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಷನ್​ಗೆ ಒಳಪಡಿಸಲಾಗಿದೆ.

ಚೀನಾದಿಂದ ಬಂದಿರುವ ವ್ಯಕ್ತಿಯಲ್ಲಿ ಪತ್ತೆಯಾಗಿರುವುದು ಕೊರೋನಾ ರೂಪಾಂತರಿ ಬಿಎಫ್7 ಅಥವಾ ಕೇವಲ ಕೋವಿಡ್ ಸೋಂಕೇ ಎಂಬುದನ್ನು ಪತ್ತೆ ಹಚ್ಚಲು ಸೋಂಕಿತ ವ್ಯಕ್ತಿಯ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್'ಗೆ ರವಾನಿಸಲಾಗಿದೆ.

ಕಳೆದ 3 ದಿನಗಳಲ್ಲಿ ವಿದೇಶಗಳಿಂದ ಬಂದಿರುವ 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 9 ಮಂದಿಯಲ್ಲಿ 5 ಮಂದಿಯನ್ನು  ಹೋಂ ಕ್ವಾರಂಟೀನ್​ಗೆ ಒಳಪಡಿಸಲಾಗಿದೆ. ಉಳಿದಂತೆ 4 ಮಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ads on article

Advertise in articles 1

advertising articles 2

Advertise under the article