ಅಮೆರಿಕಾ, ಚೀನಾ, ಬ್ರೆಜಿಲ್, ದಕ್ಷಿಣ ಕೊರಿಯಾದಲ್ಲಿ ಕೊರೋನಾ ಆ#ರ್ಭಟ; ಭಾರತದ ಮೇಲು ಪರಿಣಾಮದ ಸಾಧ್ಯತೆ; ಇಂದು ಸಭೆ

ಅಮೆರಿಕಾ, ಚೀನಾ, ಬ್ರೆಜಿಲ್, ದಕ್ಷಿಣ ಕೊರಿಯಾದಲ್ಲಿ ಕೊರೋನಾ ಆ#ರ್ಭಟ; ಭಾರತದ ಮೇಲು ಪರಿಣಾಮದ ಸಾಧ್ಯತೆ; ಇಂದು ಸಭೆ
ನವದೆಹಲಿ(Headlines Kannada): ಮಹಾಮಾರಿ ಕೊರೋನಾ ಆ#ರ್ಭಟ ದೇಶದಲ್ಲಿ ಕಡಿಮೆಯಾಗಿದ್ದರೂ, ಅಮೆರಿಕಾ, ಚೀನಾ, ಬ್ರೆಜಿಲ್ ಮತ್ತು ದಕ್ಷಿಣ ಕೊರಿಯಾದಲ್ಲಿ ಇದು ತನ್ನ ಆ#ರ್ಭಟವನ್ನು ಮುಂದುವರಿಸಿದ್ದು, ಇದು ಭಾರತದ ಮೇಲು ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕನಕ್ಕಾಗಿ ಆರೋಗ್ಯ ಸಚಿವಾಲಯವು ಇಂದು ಸಭೆ ನಡೆಸುತ್ತಿದೆ.

ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಕೊರೋನಾ ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಗಳನ್ನು ನೀಡಿದ್ದರು. ಈ ಸಂಬಂಧ ಅಂತರಾಷ್ಟ್ರೀಯ ಪರಿಸ್ಥಿತಿಗಳನ್ನು ಚರ್ಚಿಸಲು ಇಂದು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಇಂತಹ ಕ್ರಮಗಳು ದೇಶದಲ್ಲಿ ಪತ್ತೆಯಾಗುವ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ನಿಯಂತ್ರಿಸಲು ಮತ್ತು ಅಗತ್ಯ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article