
ಭಾರತದಲ್ಲಿ ಕೊರೋನಾ ಹೆಚ್ಚು ಪರಿಣಾಮ ಬೀರುವುದಿಲ್ಲ: ಗಂಗನ್‌ದೀಪ್
Saturday, December 24, 2022
ನವದೆಹಲಿ(Headlines Kannada): ಚೀನಾದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಹೊಸ ರೂಪಾಂತರಿಗಳಾದ XBB ಮತ್ತು BF.7 ಭಾರತದ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.
ಈಗಾಗಲೇ ಬಿಎಫ್.7ನ ಕೆಲವು ಪ್ರಕರಣಗಳು ಭಾರತಗಲ್ಲಿ ಪತ್ತೆಯಾಗಿದ್ದು, ಅವುಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿಲ್ಲ. ಹೀಗಾಗಿ ಭಾರತದಲ್ಲಿ ಕೊರೋನಾ ಹೆಚ್ಚಾಗುತ್ತಿದೆ ಎಂದು ನಿರೀಕ್ಷಿಸಬೇಡಿ ಎಂದು ಖ್ಯಾತ ವೈರಾಲಜಿಸ್ಟ್ ಗಂಗನ್‌ದೀಪ್ ಕಂಗ್ ಅವರು ಶುಕ್ರವಾರ ಹೇಳಿದ್ದಾರೆ.
BF.7, ಚೀನಾ ಸೇರಿದಂತೆ ಅನೇಕ ದೇಶಗಳಲ್ಲಿ ಕೊರೋನಾ ವೈರಸ್ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಈ ಭೀತಿಯ ಹಿನ್ನೆಲೆಯಲ್ಲಿ ಭಾರತ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಆರಂಭಿಸಿದೆ.