
ಗುಜರಾತ್‌ನಲ್ಲಿ ಕಾರು-ಬಸ್ ನಡುವೆ ಭೀ#ಕರ ಅ#ಪಘಾತ; 9 ಮಂದಿ ಸಾ#ವು-28 ಜನರಿಗೆ ಗಾಯ
ನವಸಾರಿ(Headlines Kannada): ಶನಿವಾರ ತಡರಾತ್ರಿ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಕಾರು-ಬಸ್ಸಿನ ನಡೆಯುವೆ ನಡೆದ ಭೀ#ಕರ ಅ#ಪಘಾತದಲ್ಲಿ 9 ಮಂದಿ ಸಾ#ವನ್ನಪ್ಪಿ 28 ಜನರು ಗಾ#ಯಗೊಂಡಿರುವ ಘಟನೆ ನಡೆದಿದೆ.
ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ವೇಳೆ ಟೊಯೊಟಾ ಫಾರ್ಚುನರ್ ಕಾರಿಗೆ ಡಿ#ಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಈ ಘಟನೆಗೂ ಮುನ್ನ ಚಾಲಕನಿಗೆ ಹೃ#ದಯಾಘಾತವಾಗಿದ್ದು, ಇದರಿಂದ ವಾಹನದ ನಿಯಂತ್ರಣ ತಪ್ಪಿ ಭೀ#ಕರ ಅ#ಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಜನರ ಪೈಕಿ ಎಂಟು ಮಂದಿ ಹಾಗೂ ಬಸ್‌ನ ಚಾಲಕ ಸ್ಥಳದಲ್ಲೇ ಮೃ#ತಪಟ್ಟಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗುಜರಾತ್ ನ ಅಂಕಲೇಶ್ವರ ನಿವಾಸಿಗಳಾಗಿದ್ದು, ಅವರು ವಲ್ಸಾದ್‌ನಿಂದ ತಮ್ಮ ಊರಿಗೆ ಹಿಂತಿರುಗುತ್ತಿದ್ದರು. ಬಸ್‌ನ ಪ್ರಯಾಣಿಕರು ವಲ್ಸಾದ್‌ನಿಂದ ಬಂದವರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಧಾನಿ ಮೋದಿ, ಶಾ ಸಂತಾಪ
ಈ ಭೀ#ಕರ ಅ#ಪಘಾತ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗು ಗೃಹ ಸಚಿವ ಅಮಿತ್ ಶಾ ಸಂತಾಪ ವ್ಯಕ್ತಪಡಿಸಿದ್ದಾರೆ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರತಿ ಮೃ#ತರ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.