ಗುಜರಾತ್ ಚುನಾವಣೆ; ಯುವ ನಾಯಕರಾದ ಜಿಗ್ನೇಶ್ ಮೇವಾನಿ-ಹಾರ್ದಿಕ್ ಪಟೇಲ್'ಗೆ ಗೆಲುವು
ಗಾಂಧಿನಗರ(Headlines Kannada): ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಯುವ ನಾಯಕ ಜಿಗ್ನೇಶ್ ಮೇವಾನಿ ಹಾಗು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಪಟೀದಾರ್ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್ ಗೆಲುವಿನ ನಗೆ ಬೀರಿದ್ದಾರೆ.
ಎರಡಂದೆ ಬರಿ ಜಯ ಗಳಿಸಿರುವ ಗುಜರಾತ್‌ನ ವಡ್ಗಾಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಮೇವಾನಿಗೆ ಬಿಜೆಪಿ ಅಭ್ಯರ್ಥಿ ಮಣಿಲಾಲ್ ವಘೇಲಾ ಭಾರೀ ಸ್ಪರ್ಧೆ ನೀಡಿದ್ದರು. ಆದರೆ ಅಂತಿಮವಾಗಿ ಎರಡು ಸಾವಿರಕ್ಕೂ ಹೆಚ್ಚು ಮತಗಳಿಂದ ಮೇವಾನಿ ವಿಜಯದ ನಗೆ ಬೀರಿದ್ದಾರೆ.
ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಮೇವಾನಿ ಬಿಜೆಪಿ ಹತ್ತೊಂಬತ್ತು ವಿರಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಸ್ಪರ್ಧೆ ಮಾಡಿದ ಮೊದಲ ಚುನಾವಣೆಯಲ್ಲೇ ಗೆಲ್ಲುವ ಮೂಲಕ ಸುದ್ದಿಯಾಗಿದ್ದ ಅವರು, 2021ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ವಿರಾಮಗಾಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಾರ್ದಿಕ್ ಪಟೇಲ್ ಅವರು, ಕಾಂಗ್ರೆಸ್ ಲಖಾಭಾಯ್ ಭಾರವಾಡ್ ಅವರನ್ನು 50,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ.
2015ರಲ್ಲಿ ಗುಜರಾತ್‍ನಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿ ಪರ ನಡೆದಿದ್ದ ಪ್ರತಿಭಟನೆಯ ನೇತೃತ್ವ ವಹಿಸುವ ಮೂಲಕ ಬಿಜೆಪಿಗೆ ಸೆಡ್ಡು ಹೊಡೆದು ದೊಡ್ಡ ಸಂಚಲನ ಉಂಟುಮಾಡಿದ್ದ ಹಾರ್ದಿಕ್ ಪಟೇಲ್, ಕಾಂಗ್ರೆಸ್ ಸೇರಿ ಬಳಿಕ ಅಲ್ಲಿಂದಲೂ ಹೊರಬಂದು ಬಿಜೆಪಿಗೆ ಸೇರಿದ್ದರು.