ಶಾಂತಿ‌, ಸಹಬಾಳ್ವೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಉಡುಪಿಯಲ್ಲಿ ಜೆರಾಲ್ಡ್ ಐಸಾಕ್ ಲೋಬೊ ಅಭಿಮತ

ಶಾಂತಿ‌, ಸಹಬಾಳ್ವೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಉಡುಪಿಯಲ್ಲಿ ಜೆರಾಲ್ಡ್ ಐಸಾಕ್ ಲೋಬೊ ಅಭಿಮತ


ಉಡುಪಿ (Headlines Kannada): ಎಲ್ಲಿ ಪ್ರೀತಿ ಶಾಂತಿ ಮತ್ತು ಸಹಬಾಳ್ವೆ ಇದೆಯೋ ಅಲ್ಲಿ ದೇವರ ವಾಸ ಇರುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. |ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ಅವರು ಶುಕ್ರವಾರ ಉಡುಪಿ ಶೋಕಮಾತಾ ದೇವಾಲಯದ ಸಭಾಂಗಣದಲ್ಲಿ ಧರ್ಮಪ್ರಾಂತ್ಯದ ವತಿಯಿಂದ ಆಯೋಜಿಸಿದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಹಿರಿಯ ನ್ಯಾಯಾಧೀಶೆ ಶರ್ಮಿಳಾ ಮಾತನಾಡಿ, ಕ್ರಿಸ್ಮಸ್ ಹಬ್ಬ ಶಾಂತಿ ಮತ್ತು ಪ್ರೀತಿಯ ಸಂದೇಶವನ್ನು ಜಗತ್ತಿಗೆ ಸಾರಿದೆ. ಯೇಸು ಕ್ರಿಸ್ತರು ನೀಡಿದ ಸಂದೇಶದಂತೆ ಬಾಳಲು ಪ್ರತಿಯೊಬ್ಬರು ಪ್ರಯತ್ನಿಸೋಣ ಎಂದರು.

ಉಡುಪಿ ಪತ್ರಿಕಾ ಭವನದ ನೂತನ ಸಂಚಾಲಕ ಹಾಗೂ ಸಹ ಸಂಚಾಲಕರಾದ ಅಜಿತ್ ಆರಾಡಿ ಮತ್ತು ಅಂಕಿತ್ ಶೆಟ್ಟಿಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಬಿ ಮಂಜುನಾಥ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಧರ್ಮಪ್ರಾಂತ್ಯದ ಕುಲಪತಿ ರೋಶನ್ ಡಿ’ಸೋಜಾ, ಮಿಲಾಗ್ರಿಸ್ ಕ್ಯಾಥೆಡ್ರಲ್ ನ ರೆಕ್ಟರ್ ವಲೇರಿಯನ್ ಮೆಂಡೊನ್ಸಾ ಉಪಸ್ಥಿತರಿದ್ದರು.

ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ಸ್ವಾಗತಿಸಿ, ಮಾಧ್ಯಮ ಸಂಯೋಜಕ ಮೈಕಲ್ ರೊಡ್ರಿಗಸ್ ವಂದಿಸಿದರು. ಉಜ್ವಾಡ್ ಪತ್ರಿಕೆಯ ಸಂಪಾದಕ ರೊಯ್ಸನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article