ಜಲೀಲ್ ಹ#ತ್ಯೆ ಹಿನ್ನೆಲೆ; ಸುರತ್ಕಲ್, ಪಣಂಬೂರು ಸೇರಿದಂತೆ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ನಿ#ಷೇಧಾಜ್ಞೆ ಜಾರಿ: ಬಿಗಿ ಬಂದೋಬಸ್ತ್

ಜಲೀಲ್ ಹ#ತ್ಯೆ ಹಿನ್ನೆಲೆ; ಸುರತ್ಕಲ್, ಪಣಂಬೂರು ಸೇರಿದಂತೆ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ನಿ#ಷೇಧಾಜ್ಞೆ ಜಾರಿ: ಬಿಗಿ ಬಂದೋಬಸ್ತ್


ಸುರತ್ಕಲ್(Headlines Kannada):  ಶನಿವಾರ ರಾತ್ರಿ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಅಬ್ದುಲ್ ಜಲೀಲ್ ಹ#ತ್ಯೆಯ ಹಿನ್ನೆಲೆಯಲ್ಲಿ ಸುರತ್ಕಲ್ ಪರಿಸರದಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. 

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಪಣಂಬೂರು, ಬಜ್ಪೆ, ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ (ಡಿ.25) ಬೆಳಗ್ಗೆ 6ರಿಂದ ಡಿ.27ರ ಬೆಳಗ್ಗೆ 6ರವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿಗೊಳಿಸಲಾಗಿರುವ ಈ 4 ಠಾಣೆಗಳ ವ್ಯಾಪ್ತಿಯಲ್ಲಿ ಇರುವ ಕೈಗಾರಿಕೆಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಕಚೇರಿಗಳ ಕೆಲಸದ ಪಾಳಿಯನ್ನು ಸಂಜೆ 6ಕ್ಕೆ ಬದಲಾಯಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ರಾತ್ರಿ 6ರ ನಂತರದ ಪಾಳಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಅನಗತ್ಯವಾಗಿ ರಸ್ತೆಗಳಲ್ಲಿ ಅಡ್ಡಾಡದಂತೆ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೂಚಿಸಿದ್ದಾರೆ.

ಈ 4 ಠಾಣೆಗಳ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10ರಿಂದ ಡಿ.27ರಂದು ಬೆಳಗ್ಗೆ 10ರವರೆಗೆ ಮ#ದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕೋರಿದ್ದಾರೆ.

Ads on article

Advertise in articles 1

advertising articles 2

Advertise under the article