ಜಲೀಲ್ ಹ#ತ್ಯೆ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ ಪೊಲೀಸರು; ಬಂಧಿತರ ಸಂಖ್ಯೆ ನಾಲ್ಕಕ್ಕೇರಿಕೆ
ಸುರತ್ಕಲ್ (Headlines Kannada): ಶನಿವಾರ ರಾತ್ರಿ ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹ#ತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.
ಬಂಧಿತ ಆರೋಪಿಯನ್ನು ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ 8:30ರ ಸುಮಾರಿಗೆ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಜಲೀಲ್ ಅವರನ್ನು ಕಾಟಿಪಳ್ಳ 4ನೇ ಬ್ಲಾಕ್‌ನ ನೈತಂಗಡಿ ಎಂಬಲ್ಲಿರುವ ಅವರ ಅಂಗಡಿಯ ಮುಂದೆಯೇ ಚೂ#ರಿಯಿಂದ ಇ#ರಿದು ಕೊ#ಲೆ ಮಾಡಲಾಗಿತ್ತು. ಕೊ#ಲೆ ಮಾಡಿದ್ದ ಇಬ್ಬರು ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈಗ ಈ ಪ್ರಕರಣದ ಪ್ರಮುಖ ಆರೋಪಿ ಎಂದೇ ಹೇಳಲಾಗುತ್ತಿರುವ ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ ಎಂಬಾತನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಶೈಲೇಶ್ ಪೂಜಾರಿ ಸುರತ್ಕಲ್ ಠಾಣೆಯಲ್ಲಿ ರೌ#ಡಿ ಶೀ#ಟರ್ ಆಗಿದ್ದು, ಹಲವು ಪ್ರಕರಣಗಳಲ್ಲಿ ಶೈಲೇಶ್ ಆರೋಪಿಯಾಗಿದ್ದಾನೆ. ಸುವಿನ್ ಕಾಂಚನ್ ಮೂಲ್ಕಿ ಹಾಗು ಸುರತ್ಕಲ್ ಠಾಣೆಯಲ್ಲಿ ರೌ#ಡಿ ಶೀ#ಟರ್, ಈತನ ವಿರುದ್ಧ ಮೂಲ್ಕಿ ಮೈಸೂರು, ಪಡುಬಿದ್ರೆ, ಸುರತ್ಕಲ್ ಠಾಣೆಗಳಲ್ಲಿ ಹಲವು ಪ್ರಕರಣಗಳಿವೆ.