ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋ#ಟ; 5 ಮಂದಿ ಸಾ#ವು-49 ಮಂದಿಗೆ ಗಾಯ

ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋ#ಟ; 5 ಮಂದಿ ಸಾ#ವು-49 ಮಂದಿಗೆ ಗಾಯ


ಜೋಧಪುರ(Headlines Kannada): ಮದುವೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋ#ಟಗೊಂಡ ಪರಿಣಾಮ 5  ಮಂದಿ ಸಾ#ವನ್ನಪ್ಪಿದ್ದು, 49 ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ.

ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋ#ಟಗೊಂಡ ಪರಿಣಾಮ ಐವರು ಸಾ#ವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ.

ಭೂಂಗಾರ ಗ್ರಾಮದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋ#ಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಗಾಯಾಳುಗಳನ್ನು ಎಂಜಿಎಚ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.

ಅವಘಡದ ವೇಳೆ ಗಾಯಗೊಂಡವರಲ್ಲಿ ಕೆಲವರಿಗೆ ಶೇ 80ರಿಂದ 100ರಷ್ಟು ಸು#ಟ್ಟ ಗಾಯಗಳಾಗಿವೆ, ಮದುಮಗ ಸುರೇಂದ್ರ ಸಿಂಗ್ ಅವರ ಮನೆಯಲ್ಲಿ ಅತಿಥಿಗಳು ಜಮಾಯಿಸಿದ್ದರು ಮತ್ತು ಅವರಿಗೆ ಆಹಾರವನ್ನು ಸಿದ್ಧಪಡಿಸುವ ವೇಳೆ ಅವಘಡ ನಡೆದಿದೆ.

ಮನೆಯ ಸ್ಟೋರ್ ರೂಂನಲ್ಲಿ ಇರಿಸಲಾಗಿದ್ದ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಬೆಂ#ಕಿ ಹೊತ್ತಿಕೊಂಡು ಸ್ಫೋ#ಟಗೊಂಡಿದ್ದು, ಈ ವೇಳೆ ಅಲ್ಲಿ ಜಮಾಯಿಸಿದ್ದ ಇತರ ಅತಿಥಿಗಳು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಇಬ್ಬರು ಮಕ್ಕಳಾದ ರತನ್ ಸಿಂಗ್ (5) ಹಾಗು ಖುಷ್ಬೂ (4) ಸ್ಥಳದಲ್ಲೇ ಸಾ#ವ#ನ್ನಪ್ಪಿದ್ದಾರೆ ಎಂದು ಜೋಧ್‌ಪುರ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅನಿಲ್ ಕಯಾಲ್ ಹೇಳಿದ್ದಾರೆ.

ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕೇಂದ್ರ ಸಚಿವ ಮತ್ತು ಜೋಧ್‌ಪುರ ಸಂಸದ ಗಜೇಂದ್ರ ಸಿಂಗ್ ಶೇಖಾವತ್ ಅವರು ಘಟನೆಯಲ್ಲಿ ಜೀವ#ಹಾನಿಯ ಬಗ್ಗೆ ಸಂತಾಪ ಸೂಚಿಸಿದ್ದಾರೆ.  ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.


Ads on article

Advertise in articles 1

advertising articles 2

Advertise under the article