ಉಡುಪಿ ಕೃಷ್ಣಮಠಕ್ಕೆ ಮಿಜೋರಾಮ್ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ

ಉಡುಪಿ ಕೃಷ್ಣಮಠಕ್ಕೆ ಮಿಜೋರಾಮ್ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ


ಉಡುಪಿ(Headlines Kannada): ಉಡುಪಿ ಶ್ರೀಕೃಷ್ಣಮಠಕ್ಕೆ ಮಿಜೋರಾಮ್ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಇಂದು‌ ಭೇಟಿ ನೀಡಿ ದೇವರ ದರ್ಶನ ಪಡೆದರು.‌

ದೇವರ ದರ್ಶನ ಪಡೆದ ಬಳಿಕ‌ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಅವರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ,ಉದ್ಯಮಿ ಗುರ್ಮೆ ಸುರೇಶ ಶೆಟ್ಟಿ,ವಾಸುದೇವ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article