ಉಡುಪಿಯಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಿಂದ ರಾಷ್ಟ್ರೀಯ ರೈತ ದಿನಾಚರಣೆ: ಸಾಧಕ ರೈತರಿಗೆ ಸನ್ಮಾನ
Saturday, December 24, 2022
ಉಡುಪಿ (Headlines Kannada): ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಾದ ರಾಮಕೃಷ್ಣ ಶರ್ಮ ಬಂಟಕಲ್ಲು, ರಘುಪತಿ ರಾವ್ ಮಾವಿನಕಾಡು, ಸತೀಶ್ ಹೆಗ್ಡೆ ಅಮಾಸೆಬೈಲ್, ಹಾಜಿ ಅಲಿಯಬ್ಬ ಉಚ್ಚಿಲ, ಪ್ರೇಮ ಪೂಜಾರಿ ಕುಂಭಾಶಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕ ಮೋಹನ್ ರಾಜ್, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಮುಂಡಾಜೆ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಅಲ್ವಿನ್ ಅಂದ್ರಾದೆ ಹಾಗೂ ದಯಾನಂದ ಶೆಟ್ಟಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಮಲಬಾರ್ ಗೋಲ್ಡ್ ನ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ, ತಂಝೀಮ್ ಶಿರ್ವ ಉಪಸ್ಥಿತರಿದ್ದರು, ರಾಘವೇಂದ್ರ ನಾಯಕ್ ಸ್ವಾಗತಿಸಿದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.