ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ಪುನರಾರಂಭ

ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ಪುನರಾರಂಭ

ಉಡುಪಿ(Headlines Kannada):  ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ಕರ್ನಾಟಕ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದ್ದು, ಇಂದು ಶಾಸಕರಾದ ಕೆ. ರಘುಪತಿ ಭಟ್ ಅವರು ಸೇತುವೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಮಲ್ಪೆ ಬೀಚ್ ನಿರ್ವಾಹಕರಾದ ಸುದೇಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Ads on article

Advertise in articles 1

advertising articles 2

Advertise under the article