ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಉದ್ಘಾಟಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್
ಉಡುಪಿ (Headlines Kannada): ಉಡುಪಿ ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಿಸಿರುವ ವಿಜ್ಞಾನ ಕೇಂದ್ರವನ್ನು ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡೆ, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಶನಿವಾರ ಸಂಜೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ರೇಷ್ಮೆ ಕೃಷಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆ.ಸಿ ನಾರಾಯಣ ಗೌಡ,, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಉಪಸ್ಥಿತರಿದ್ದರು.