ಮತ್ತೆ ಕೊರೋನಾ ಬಗ್ಗೆ ನಾವೆಲ್ಲಾ ಎಚ್ಚರವಹಿಸಬೇಕಿದೆ: ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ
Sunday, December 25, 2022
ನವದೆಹಲಿ(Headlines Kannada): ಕೆಲವು ದೇಶಗಳಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾವೂ ಎಚ್ಚರವಹಿಸಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ರವಿವಾರ ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್ ಕಿ ಬಾತ್’ನ 96ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಈಗ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ನಾವು ಈ ಬಗ್ಗೆ ಜಾಗರೂಕರಾಗಿರಬೇಕಿದ್ದು, ಮಾಸ್ಕ್ ಧರಿಸುವುದು, ಕೈಗಳನ್ನು ತೊಳೆದುಕೊಳ್ಳುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದರು.
ನಾವೆಲ್ಲ ಹಬ್ಬಗಳನ್ನು ಆಚರಿಸಬೇಕು, ಆದರೆ ಸ್ವಲ್ಪ ಜಾಗರೂಕರಾಗಿರಿ, ನಾವು ಜಾಗರೂಕರಾಗಿದ್ದರೆ ನಂತರ ನಾವು ಸುರಕ್ಷಿತವಾಗಿರುತ್ತೇವೆ. ಇದರಿಂದ ನಮ್ಮ ಸಂತೋಷಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದರು.