ಮೂಡಬಿದ್ರೆಯ ಅಲಂಗಾರಿನಲ್ಲಿ ಅ#ಕ್ರಮ ಕ#ಸಾಯಿ ಖಾನೆಗೆ ಹಿಂದೂ ಜಾಗರಣಾ ವೇದಿಕೆ ದಾ#ಳಿ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಮೂಡಬಿದ್ರೆಯ ಅಲಂಗಾರಿನಲ್ಲಿ ಅ#ಕ್ರಮ ಕ#ಸಾಯಿ ಖಾನೆಗೆ ಹಿಂದೂ ಜಾಗರಣಾ ವೇದಿಕೆ ದಾ#ಳಿ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಮೂಡಬಿದ್ರೆ (Headlines Kannada): ಮೂಡಬಿದ್ರೆಯ ಅಲಂಗಾರು ಎಂಬಲ್ಲಿ ಅ#ಕ್ರಮ ಕ#ಸಾಯಿ ಖಾನೆಗೆ ಶನಿವಾರ ಬೆಳ್ಳಂಬೆಳಗ್ಗೆ ದಾ#ಳಿ ನಡೆಸಿದ  ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಇಬ್ಬರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ವ#ಧೆ ಮಾಡಲು ತಂದಿದ್ದ 4 ಗೋವು ಮತ್ತು ಭಾರೀ ಪ್ರಮಾಣ ಮಾಂ#ಸ ಈ ವೇಳೆ ಪತ್ತೆಯಾಗಿದೆ. ಕೆ.ಜಿ ಗಟ್ಟಲೇ ದನದ ಮಾಂ#ಸ ಸಹಿತ ಕ್ಲಾರಿನ್ ಅಲ್ವಿನ್ ಹಾಗು ಗಿಲ್ಬರ್ಟ್ ಮಿರಂದ ಎಂಬ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ

ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬಾತನಿಗೆ ಸೇರಿದ್ದ ಅ#ಕ್ರಮ ಕ#ಸಾಯಿ ಖಾನೆಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮುಂಜಾನೆ 4 ಗಂಟೆಯ ಸುಮಾರಿಗೆ ದಾ#ಳಿ ಮಾಡಿದ್ದಾರೆ. ಕಾರ್ಯಕರ್ತರು ತೋಟವನ್ನೆಲ್ಲಾ ಪರಿಶೀಲಿಸಿ ಅಗೆದು ನೋಡಿದಾಗ ದನದ ತಲೆಯ ಭಾಗಗಳು ಪತ್ತೆಯಾಗಿವೆ ಎನ್ನಲಾಗಿದೆ. 

ಖಚಿತ ಮಾಹಿತಿ ಮೇರೆಗೆ ದಾ#ಳಿ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಆರೋಪಿಗಳಾದ ಕ್ಲಾರಿನ್ ಅಲ್ವಿನ್ ಮತ್ತು ಗಿಲ್ಬರ್ಟ್ ಮಿರಾಂದ ಎಂಬಾತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


Ads on article

Advertise in articles 1

advertising articles 2

Advertise under the article