ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯ; ಆಡಳಿತಾರೂಢ ಬಿಜೆಪಿಯ ಒಕ್ಕಲಿಗ ಸಚಿವರು-ಶಾಸಕರಿಂದ ಮನವಿ

ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯ; ಆಡಳಿತಾರೂಢ ಬಿಜೆಪಿಯ ಒಕ್ಕಲಿಗ ಸಚಿವರು-ಶಾಸಕರಿಂದ ಮನವಿ



ಬೆಳಗಾವಿ (Headlines Kannada): ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯಿಸಿ ಆಡಳಿತಾರೂಢ ಬಿಜೆಪಿ ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರು ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅವರನ್ನು ಭೇಟಿ ಮಾಡಿ  ಮನವಿ ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಒಕ್ಕಲಿಗ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರು ಸಾಕಷ್ಟು ಜನರಿದ್ದು, ಒಕ್ಕಲಿಗ ಸಮುದಾಯದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಕಡಿಮೆ ಇದೆ. ಆದ್ದರಿಂದ ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು  ಹೇಳಿದರು.

ಒಕ್ಕಲಿಗ ಸಮುದಾಯದಲ್ಲಿ ಬಹುತೇಕರು ರೈತರಾಗಿದ್ದು, ದೇಶಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ನಾವು ನಮ್ಮ ಸಮುದಾಯಕ್ಕೆ ಹೆಚ್ಚು ಮೀಸಲಾತಿ ಕೇಳಿಲ್ಲ, ಜನಸಂಖ್ಯೆಗೆ ಅನುಗುಣವಾಗಿ ನೀಡುವಂತೆ ಮನವಿ ಮಾಡಿದ್ದೇವೆ ಎಂದ ಸುಧಾಕರ್,  CM ಬಸವರಾಜ ಬೊಮ್ಮಾಯಿಯವರು ಎಲ್ಲಾ ಸಮುದಾಯಗಳ ಅಗತ್ಯವೇನು ಎಂಬುದನ್ನು ಅರಿತಿದ್ದಾರೆ. ಅವರು ಎಲ್ಲರಿಗೂ ಸಾಮಾಜಿಕ ನ್ಯಾಯ ದರಕಿಸಿಕೊಡಲಿದ್ದಾರೆ  ಎಂದರು.

Ads on article

Advertise in articles 1

advertising articles 2

Advertise under the article