ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಬಿಡುಗಡೆ: ರಾಮಲಿಂಗಾ ರೆಡ್ಡಿ
ಬೆಂಗಳೂರು(Headlines Kannada): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ತನ್ನ ಪಟ್ಟಿಯನ್ನು ಜನವರಿ ವೇಳೆಗೆ ಬಿಡುಗಡೆ ಮಾಡಲು ಮುಂದಾಗಿದೆ.
2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಚುನಾವಣಾ ಸಮಿತಿಯನ್ನು ರಚಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು. ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಕಾಂಗ್ರೆಸ್ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಆದರೆ BJP ಸೋಲುವುದು ನಿಶ್ಚಿತವಾಗಿದ್ದು, ಹೀಗಾಗಿ ಅಲ್ಲಿ ಆಕಾಂಕ್ಷಿಗಳು ಕಡಿಮೆ ಇದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರನ್ನು ನಾಯಿಗಳಿಗೆ ಹೋಲಿಸಿರುವ BJP ಮುಖಂಡರನ್ನು ಏನೆಂದು ಕರೆಯಬೇಕೋ ತಿಳಿಯುತ್ತಿಲ್ಲ. ನಾವು ಬಿಜೆಪಿಗರನ್ನು ನಾ#ಯಿಗೆ ಹೋಲಿಸುವುದಿಲ್ಲ. ಕಾರಣ ನಾ#ಯಿ ಅತ್ಯಂತ ನಿಯತ್ತಿನ ಪ್ರಾಣಿಯಾಗಿರುವುದರಿಂದ ಅವರನ್ನು ಬೇರೆ ಪ್ರಾಣಿಗೆ ಹೋಲಿಸಬೇಕು. ಇವರಿಗೆ ಯಾವ ಪ್ರಾಣಿ ಸೂಕ್ತ ಎಂಬುದನ್ನು ನಂತರದ ದಿನಗಳಲ್ಲಿ ತಿಳಿಸುತ್ತೇವೆ ಎಂದರು.