ಸೌದಿ ಅರೇಬಿಯಾದ ಅಲ್-ನಸ್ರ್ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ!

ಸೌದಿ ಅರೇಬಿಯಾದ ಅಲ್-ನಸ್ರ್ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ!ದುಬೈ: ಮ್ಯಾಂಚೆಸ್ಟರ್ ಯುನೈಟೆಡ್ ತಂಡವನ್ನು ತೊರೆದಿರುವ ಪೋರ್ಚುಗಲ್‌ ಫುಟ್ಬಾಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಸೌದಿ ಅರೇಬಿಯಾದ ಅಲ್-ನಸ್ರ್ ಕ್ಲಬ್  ಪರ ಮುಂದಿನ ಎರಡೂವರೆ ವರ್ಷಗಳ ಅವಧಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

5 ಬಾರಿ ಬ್ಯಾಲನ್ ಡಿವೋ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ಕ್ರಿಸ್ಟಿಯಾನೊ ರೊನಾಲ್ಡೊ 2022ರ FIFA ವಿಶ್ವಕಪ್‌ನಲ್ಲಿ ಸೋಲನ್ನು ಕಾಣುವ ಮೂಲಕ ಹೊರನಡೆದಿದ್ದರು. ಇದೀಗ 2025ರ ವರೆಗೆ  ಅಲ್-ನಸ್ರ್ ಕ್ಲಬ್ ಪರ ಆಡಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಕ್ಲಬ್ ಹೇಳಿಕೆ ನೀಡಿದೆ. 

ಈ ಸಂಬಂಧ ಹಣಕಾಸು ವ್ಯವಹಾರವನ್ನು ಬಹಿರಂಗಪಡಿಸಿಲ್ಲ. ಆದರೆ ರೊನಾಲ್ಡೊನೊಂದಿಗೆ 200 ಮಿಲಿಯನ್ ಯುರೋಗಿಂತಲೂ ಅಧಿಕ ಮೌಲ್ಯದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸುದ್ದಿಮಾಧ್ಯಮಗಳು ವರದಿ ಮಾಡಿವೆ. 

ಈ ಬಗ್ಗೆ ಮಾತನಾಡಿದ ರೊನಾಲ್ಡೋ, ಯೂರೋಪಿಯನ್ ಫುಟ್ಬಾಲ್‌ನಲ್ಲಿ ನಾನು ಇರಿಸಿಕೊಂಡಿದ್ದ ಎಲ್ಲ ಗುರಿಗಳನ್ನು ಸಾಧಿಸಿದ್ದೇನೆ. ಮುಂದೆ  ಏಷ್ಯಾದಲ್ಲಿ ನನ್ನ ಅನುಭವ ಹಂಚಿಕೊಳ್ಳಲು ಇದು ಸಕಾಲ ಎಂದು ಭಾವಿಸುತ್ತೇನೆ. ಇನ್ನು ಮುಂದೆ  ಹೊಸ ತಂಡದ ಸಹ ಆಟಗಾರರ ಜತೆ ಸೇರಿಕೊಳ್ಳುವುದನ್ನು ನಾನು ಎದುರು ನೋಡುತ್ತಿದ್ದೇನೆ. ಕ್ಲಬ್‌ನ ಯಶಸ್ಸಿಗೆ ಎಲ್ಲ ರೀತಿಯಲ್ಲಿಯೂ ನೆರವಾಗಲಿದ್ದೇನೆ ಎಂದು ಹೇಳಿದ್ದಾರೆ. 

Ads on article

Advertise in articles 1

advertising articles 2

Advertise under the article