
ಕರಾವಳಿಯಲ್ಲಿ ಹೆಚ್ಚುತ್ತಿರುವ ಅ#ನೈತಿಕ ಪೊ#ಲೀಸ್ ಗಿರಿಗೆ ಮುಖ್ಯಮಂತ್ರಿಯಿಂದಲೇ ಪ್ರೋತ್ಸಾಹ: ಸಿದ್ದರಾಮಯ್ಯ ಆರೋಪ
ಮಂಗಳೂರು(Headlines Kannada): ಅ#ನೈತಿಕ ಪೊಲೀಸ್ ಗಿರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಬೆಂಬಲ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಶನಿವಾರ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅ#ನೈತಿ#ಕ ಪೊ#ಲೀಸ್ ಗಿರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಕಳೆದ 2 ತಿಂಗಳಿನಿಂದ ಇಂತಹ 7-8 ನೈ#ತಿ#ಕ ಪೊಲೀಸ್ ಗಿರಿ ಘಟನೆಗಳು ಆಗಿವೆ. ಇದನ್ನು ಖಂಡಿಸುವ ಜೊತೆಗೆ . ಅನೈತಿಕ ಪೊಲೀಸ್ ಗಿರಿ ಮಾಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿಗೆ ಕಾನೂನಿನ ಬಗ್ಗೆ, ಭಾರತೀಯ ದಂಡ ಸಂಹಿತೆಯ ಬಗ್ಗೆ ಅರಿವಿದೆಯೇ, ಪೊಲೀಸ್ ನವರನ್ನು ಇಟ್ಟುಕೊಂಡಿರುವುದು ಏಕೆ, ಇಂತಹ ಘಟನೆಗಳು ಆಗುವುದನ್ನು ತಪ್ಪಿಸಬೇಕಲ್ಲವೇ ಎಂದ ಸಿದ್ದರಾಮಯ್ಯ, ಕಾನೂನು ಸುವ್ಯವಸ್ಥೆಯಲ್ಲಿ ಬೇರೆಯವರು ಅನಗತ್ಯವಾಗಿ ಮಧ್ಯಪ್ರವೇಶಿಸುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು. ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಪ್ರಚೋದನೆ ಕೊಡುವ ರೀತಿಯಲ್ಲಿ CM ಬೊಮ್ಮಾಯಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಕೊ#ಲೆ ಮಾಡಿದರೆ ಇನ್ನೊಂದು ಕೊ#ಲೆ ಮಾಡಬೇಕು ಎಂದು ಕಾನೂನು ಎಲ್ಲಾದರೂ ಹೇಳಿದೆಯಾ..? ಎಂದು ಸರಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಮಂಗಳೂರು ಕುಕ್ಕರ್ ಬ್ಲಾ#ಸ್ಟ್ ಪ್ರಕರಣವನ್ನು BJPಯವರು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಭ#ಯೋತ್ಪಾದನೆಗೆ ಬೆಂಬಲ ನೀಡುತ್ತೇವೆ ಎಂದು ಡಿಕೆಶಿ ಹೇಳಿಲ್ಲ. BJPಯವರು ಅದನ್ನು ಅವರ ಅನುಕೂಲಕ್ಕೆ ತಕ್ಕಂತೆ ಜನರ ಮುಂದೆ ತಪ್ಪು ಮಾಹಿತಿ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಹಾಗು ರಾಜ್ಯದಲ್ಲಿ BJPಪಿ ಡಬಲ್ ಎಂಜಿನ್ ಸರ್ಕಾರವಿದೆ. ಭ#ಯೋತ್ಪಾದನೆಯನ್ನು ಹತ್ತಿಕ್ಕಲಿ, BJP ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 9 ವರ್ಷವಾಗುತ್ತಾ ಬಂತು, ಜನ ಏಕೆ ಅಧಿಕಾರಕ್ಕೆ ಕೊಟ್ಟಿದ್ದಾರೆ. ಕೇವಲ ಭಾವನಾತ್ಮಕ ವಿಷಯಗಳನ್ನು ಜನರ ಮುಂದಿಡುವುದಲ್ಲ, ಕೆಲಸ ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದರು.