
ಭಾರತ-ಚೀನಾ ಗಡಿ ಉ#ದ್ವಿಗ್ನತೆ; ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ವಿಪಕ್ಷಗಳಿಂದ ಗಾಂಧಿ ಪ್ರತಿಮೆ ಬಳಿ ಧರಣಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಇತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಸಿಪಿಐ, ಸಿಪಿಐ-ಎಂ, ಆರ್‌ಜೆಡಿ, ಜೆಡಿಯು, ಶಿವಸೇನೆ, ಡಿಎಂಕೆ ಹಾಗು ಎನ್‌ಸಿಪಿ ಸೇರಿದಂತೆ ಸುಮಾರು 12 ವಿರೋಧ ಪಕ್ಷಗಳ ಸಂಸದರು ಧರಣಿಯಲ್ಲಿ ಪಾಲ್ಗೊಂಡು ಕೇಂದ್ರ BJP ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪದೇ ಪದೇ ನಡೆಯುತ್ತಿರುವ ಚೀನಾದ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಉತ್ತರಿಸಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಮೌನ ಮುರಿಯಬೇಕು ಎಂದು ಧರಣಿನಿರತರು ಒತ್ತಾಯಿಸಿದರು.
ಡಿಸೆಂಬರ್ 7 ರಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದ ಭಾರತ-ಚೀನಾ ಮಧ್ಯೆ ಗಡಿ ಉದ್ವಿಗ್ನತೆ ಮತ್ತು ಇತ್ತೀಚಿನ ಚೀನಾದ ಉಲ್ಲಂಘನೆಗಳ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.
ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಹಾಗು ಚೀನಾದ ಸೈನಿಕರು ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ (ಎಲ್‌ಎಸಿ) ಘ#ರ್ಷಣೆ ನಡೆಸಿದ್ದು, 'ಮುಖಾಮುಖಿಯಲ್ಲಿ ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ' ಎಂದು ಭಾರತೀಯ ಸೇನೆ ತಿಳಿಸಿದೆ.