
ಮುತಾಲಿಕ್'ಗೆ ಕಾರ್ಕಳ ಮತದಾರರೇ ತಕ್ಕ ಉತ್ತರ ನೀಡಲಿದ್ದಾರೆ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕಿಡಿ
Wednesday, December 14, 2022
ಕುಂದಾಪುರ (Headlines Kannada): ಬಿಜೆಪಿಯದು ಡೊಂಗಿ ಹಿಂದುತ್ವ ಎನ್ನುವ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಅವರು ಚುನಾವಣೆಗೆ ಸ್ಪರ್ಧಿಸಿದಲ್ಲಿ, ಕಾರ್ಕಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಫಲಿತಾಂಶ ಮೂಲಕ ತಕ್ಕ ಉತ್ತರ ಕೊಡುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿಯಾಗಿದ್ದು, ಸಂಘಟನೆ ಹಾಗೂ ಅಭಿವೃದ್ಧಿಯಲ್ಲಿ ಕಾರ್ಕಳವನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿ ಇರಿಸಿದ್ದಾರೆ. ಮುತಾಲಿಕ್ ಅವರ ಬಗ್ಗೆ ಗೌರವ ಇದೆ. ಇದು ಖಂಡಿತ ಅವರ ತೀರ್ಮಾನವಲ್ಲ; ಕೆಲ ವಿಘ್ನ ಸಂತೋಷಿಗಳು, ಗೊಂದಲ ಸೃಷ್ಟಿಸಲು ಅವರನ್ನು ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.