ಕಂದಕಕ್ಕೆ ಉರುಳಿ ಬಿದ್ದ ಕಾರು; ಶಬರಿಮಲೆಯಿಂದ ಹಿಂದಿರುಗುತ್ತಿದ್ದ 8 ಮಂದಿ ಭಕ್ತರು ಸಾ#ವು
Saturday, December 24, 2022
ಚೆನ್ನೈ(Headlines Kannada): ಶಬರಿಮಲೆಯಿಂದ ಹಿಂದಿರುಗುತ್ತಿದ್ದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 8 ಮಂದಿ ಸಾ#ವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಇಂದು ನಡೆದಿದೆ.
ತಮಿಳುನಾಡಿನ ತೇಣಿ ಜಿಲ್ಲೆಯ ಕುಮುಲಿ ಮೌಂಟೇನ್ ಪಾಸ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಕಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ 8 ಮಂದಿ ಭಕ್ತರು ಸಾ#ವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಗು ಸೇರಿದಂತೆ ಇಬ್ಬರಿಗೆ ಗಂ#ಭೀರ ಗಾ#ಯಗಳಾಗಿವೆ.
ಈ ವೇಳೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃ#ತಪಟ್ಟ ಎಲ್ಲಾ 8 ಮಂದಿ ಪ್ರಯಾಣಿಕರು ಥೇಣು ಆಂಡಿಪೆಟ್ಟಿಯ ಮೂಲದವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.