
ಕರ್ನಾಟಕದಲ್ಲಿ ಮೊದಲ ಝೀಕಾ ವೈ#ರಸ್ ಪತ್ತೆ; ರಾಯಚೂರು ಜಿಲ್ಲೆಯ 5 ವರ್ಷದ ಬಾಲಕಿಯಲ್ಲಿ ಸೋಂ#ಕು ದೃಢ: ಆರೋಗ್ಯ ಸಚಿವ ಡಾ. ಸುಧಾಕರ್
ಬೆಂಗಳೂರಿನ ಆರೋಗ್ಯಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ 5 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀ#ಕಾ ವೈ#ರಸ್ ಪೀಡಿತ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಇನ್ನು ಝೀ#ಕಾ ಸೋಂ#ಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ ಎಂದು ಸುಧಾಕರ್ ಹೇಳಿದ್ದಾರೆ.
ಝೀ#ಕಾ ವೈರಸ್ ಪೀಡಿತ ಬಾಲಕಿ ಕಳೆದ 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿದ್ದಳು. ಜೊತೆಗೆ ನವೆಂಬರ್ 13ರಂದು ಜ್ವರ ಕಾಣಿಸಿಕೊಂಡಿತ್ತು. ಮೊದಲು ಬಾಲಕಿಗೆ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಬಾಲಕಿಯನ್ನು ಡೆಂಘೀ ಜ್ವರ ದೃಢಪಟ್ಟ ಹಿನ್ನೆಲೆ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ವೈದ್ಯರು ಬಾಲಕಿಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಿದ್ದು ಡಿಸೆಂಬರ್ ಒಂಭತ್ತರಂದು ಪಾಸಿಟಿವ್ ಬಂದಿತ್ತು ಎಂದರು.
ಬಾಲಕಿಯಲ್ಲಿ ಸೋಂ#ಕು ಕಾಣಿಸಿಕೊಂಡಿರುವುದರಿಂದ ರಾಯಚೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಝೀಕಾ ವೈರಸ್ ಸೋಂಕು ಕುರಿತಂತೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದರು.