
ಬಡವರ ಅಭಿವೃದ್ಧಿ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ: ಐಕ್ಯತಾ ಸಮಾವೇಶದ ಪೂರ್ವಸಿದ್ಧತಾ ಸಭೆಯಲ್ಲಿ ಆಂಜನೇಯ
ಹೊಳಲ್ಕೆರೆ(Headlines Kannada): ಚಿತ್ರದುರ್ಗದಲ್ಲಿ ಜನವರಿ 8 ರಂದು ಪರಿಶಿಷ್ಟ ಜಾತಿ ಮತ್ತು ಪಂಗಡದ ಐಕ್ಯತಾ ಸಮಾವೇಶದ ಏರ್ಪಡಿಸಲಾಗಿದ್ದು ಈ ಸಂಬಂಧ ಹೊಳಲ್ಕೆರೆ ಪಟ್ಟಣದ ಒಂಟಿಕಾಲು ಮಠದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎಚ್ ಆಂಜನೇಯ, ಈಗಾಗಲೇ ಬಿಜೆಪಿ ಸರ್ಕಾರದ ವಿರುದ್ಧ ಜನರು ರೋಸಿ ಹೋಗಿದ್ದು, ಹಿಂದೆ ಕಾಂಗ್ರೆಸ್ ಸರ್ಕಾರ ದಲಿತರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿತ್ತು. ಈಗ ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಹೆಚ್ಚು ನೀಡುತ್ತಿದ್ದ ಸಹಾಯ ಧನವನ್ನು ಕಡಿತಮಾಡಿ ತಾರತಮ್ಯ ಮಾಡುತ್ತಿದೆ. ಅದಕ್ಕಾಗಿ ಇಂತಹ ಸರ್ಕಾರ ಕಿತ್ತು ಹೊಗೆದು ಕಾಂಗ್ರೆಸ್ ಸರ್ಕಾರ ಹೆಚ್ಚಿನ ಬಹುಮತದೊಂದಿಗೆ ತರಬೇಕು. ಬಡವರು ಅಭಿವೃದ್ಧಿಯಾಗಬೇಕಾದರೆ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾದ್ಯ. ಈ ಸಂಬಂಧ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ ಮನೆಗೆ ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು ಹಾಗೂ ಜನವರಿ 8ರಂದು ನಡೆಯುವ ಸದರಿ ಸಮಾವೇಶಕ್ಕೆ ಹೆಚ್ಚು ಹೆಚ್ಚು ಜನಸಂಖ್ಯೆ ಸೇರಿ ಇದು ಒಂದು ಐತಿಹಾಸಿಕ ಸಮಾವೇಶ ಆಗಬೇಕು ಎಂದು ಹೇಳಿದರು.
ಈ ವೇಳೆ ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಟಿ.ಹನುಮಂತಪ್ಪ,ಮಾಜಿ ಜಿ.ಪಂ ಸದಸ್ಯರಾದ ಡಿಕೆ.ಶಿವಮೂರ್ತಿ, ಎಸ್.ಜೆ.ರಂಗಸ್ವಾಮಿ, ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಧುಪಾಲೆ ಗೌಡ ಸೇರಿದಂತೆ ಕಾಂಗ್ರೆಸ್ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.