ಕುಂದಾಪುರ: ಇಬ್ಬರು ಅಂತರ್ ರಾಜ್ಯ ಮನೆಗ#ಳ್ಳರ ಬಂಧನ: 16 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
ಕುಂದಾಪುರ(Headlines Kannada): ನಾಲ್ಕು ತಿಂಗಳ ಹಿಂದೆ ಕೋಟೇಶ್ವರದಲ್ಲಿ ನಡೆದ ಮನೆ ಕ#ಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ ಎಚ್ (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಬಂಧಿತ ಆರೋಪಿಗಳು.
ಈ ಇಬ್ಬರು ಆರೋಪಿಗಳು 2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕಿನ ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಹೋಗಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕ#ಳ್ಳತನ ನಡೆಸಿ ಕ#ಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.