ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯನ್ನು ಇ#ರಿದುಕೊಂ#ದು, ತಾನೂ ಆ#ತ್ಮ#ಹ#ತ್ಯೆಗೆ ಯತ್ನಿಸಿದ ವಿದ್ಯಾರ್ಥಿ: ಪ್ರೀತಿ ಪ್ರೇಮದ ಶಂಕೆ
ಬೆಂಗಳೂರು(Headlines Kannada): ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾ#ಕು ಇ#ರಿದು ಕೊ#ಲೆ ಮಾಡಿರುವ ವಿದ್ಯಾರ್ಥಿಯೊಬ್ಬ ಬಳಿಕ ತಾನೂ ಆ#ತ್ಮ#ಹ#ತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಾಶಿಪುರ ಗ್ರಾಮದ ಲಯಸ್ಮಿತಾ(19) ಕೊ#ಲೆಯಾದ ವಿದ್ಯಾರ್ಥಿನಿಯಾಗಿದ್ದು, ಕೊ#ಲೆಯ ಆರೋಪಿಯನ್ನು ಪವನ್ ಕಲ್ಯಾಣ್ ಎಂದು ಗುರುತಿಸಲಾಗಿದೆ. ಈತ ಕೂಡ ಗಂ#ಭೀರ ಗಾಯಗೊಂಡು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊ#ಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ನೃಪತುಂಗ ರಸ್ತೆಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿಯಾಗಿರುವ ಪವನ್ ಕಲ್ಯಾಣ್ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಲಯಸ್ಮಿತಾಳ ಹೊಟ್ಟೆ, ಎದೆ ಭಾಗ, ಕೈಗಳಿಗೆ ಚು#ಚ್ಚಿ ಕೊ#ಲೆ ಮಾಡಿದ್ದಾನೆ. 19 ವರ್ಷದ ಲಯಸ್ಮಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದಳು.
ಇಬ್ಬರೂ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಾಶಿಪುರ ಗ್ರಾಮದವರಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಾ#ಕುವಿನೊಂದಿಗೆ ಕಾಲೇಜು ಪ್ರವೇಶಿಸಿದ ಪವನ್, ಕಾಲೇಜು ಅವರಣದಲ್ಲೇ ಯುವತಿಗೆ ಇ#ರಿದಿದ್ದಾನೆ. ಬಳಿಕ ತಾನೂ ಕೂಡ ಚಾ#ಕು ಇ#ರಿದುಕೊಂಡಿದ್ದು, ಕೂಡಲೇ ಇತರೆ ವಿದ್ಯಾರ್ಥಿಗಳು ಹಾಗು ಭದ್ರತಾ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಯುವತಿ ಲಯಸ್ಮಿತಾ ಸಾ#ವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ ಪ್ರೀತಿ ಪ್ರೇಮದ ವಿಚಾರಕ್ಕೆ ಹ#ತ್ಯೆಗೈದು ಆ#ತ್ಮ#ಹ#ತ್ಯೆಗೆ ಯತ್ನಿಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.