ಭಾರತ್​ ಜೋಡೋ ಯಾತ್ರೆಯಲ್ಲಿ  ಭಾಗಿಯಾಗಿದ್ದ ಸಂಸದ ಸಂತೋಖ್​​​​​ ಸಿಂಗ್ ಹೃದಯಾಘಾತದಿಂದ ಸಾ#ವು!

ಭಾರತ್​ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಸಂಸದ ಸಂತೋಖ್​​​​​ ಸಿಂಗ್ ಹೃದಯಾಘಾತದಿಂದ ಸಾ#ವು!

ಚಂಡೀಗಢ(Headlineskannada): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್​​​​​ ಸಿಂಗ್(77)​ ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಶನಿವಾರ ಬೆಳಗ್ಗೆ ಪಂಜಾಬ್‍ನ ಜಲಂಧರ್ ಬಳಿ ತೆರಳುತ್ತಿದ್ದಂತೆ ಸಂತೋಖ್ ಸಿಂಗ್ ಚೌಧರಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರನ್ನು ಫಗ್ವರ್‌ನ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಂತೆಯೇ ವೈದ್ಯರು ಮೃ#ತಪಟ್ಟಿರುವುದಾಗಿ ತಿಳಿಸಿದ್ದಾರೆ. 

ಚೌಧರಿ ಸಾ#ವನ್ನಪ್ಪಿದ ಸುದ್ದಿ ಹೊರ ಬರುತ್ತಿದ್ದಂತೆ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲಾಯಿತು. ಸಂತೋಖ್​​​​​ ಸಿಂಗ್​ ನಿಧನಕ್ಕೆ ರಾಹುಲ್​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​  ಸೇರಿದಂತೆ ಹಲವು ಹಗಣ್ಯರು ಸಂತಾಪ ಸೂಚಿಸಿದ್ದಾರೆ.

Ads on article

Advertise in articles 1

advertising articles 2

Advertise under the article