ವಿಜಯಪುರ ಜ್ಞಾನಯೋಗಾಶ್ರಮದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿ#ಧನ; ದರ್ಶನಕ್ಕಾಗಿ ಹರಿದುಬರುತ್ತಿರುವ ಜನ ಸಾಗರ; ಸಂಜೆ ಅಂ#ತ್ಯಕ್ರಿಯೆ

ವಿಜಯಪುರ ಜ್ಞಾನಯೋಗಾಶ್ರಮದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿ#ಧನ; ದರ್ಶನಕ್ಕಾಗಿ ಹರಿದುಬರುತ್ತಿರುವ ಜನ ಸಾಗರ; ಸಂಜೆ ಅಂ#ತ್ಯಕ್ರಿಯೆ

 ವಿಜಯಪುರ(Headlines Kannada): ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಇ#ಹಲೋಕ ತ್ಯಜಿಸಿದ್ದಾರೆ.

ಸಿದ್ದೇಶ್ವರ ಶ್ರೀಗಳ ಅಂ#ತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ಮಂಗಳವಾರ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನ ಸಾಗರವೇ ಹರಿದು ಬರುತ್ತಿದೆ. 

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸೈನಿಕ ಶಾಲೆಯ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂ#ತ್ಯಕ್ರಿಯೆ ನೆರವೇರಲಿದೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ ಹಾಗು ಕೇಂದ್ರ ಸರಕಾರದ ಸಚಿವರು, ಶಾಸಕರು ಮತ್ತು ಅಪಾರ ಭಕ್ತ ಸಮೂಹ ಈ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗಿದೆ.

ನಾಡು ಕಂಡ ಪ್ರಸಿದ್ಧ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ದೇಶ್ವರ ಶ್ರೀಗಳ ಅಂ#ತ್ಯಸಂ#ಸ್ಕಾರವನ್ನು ರಾಜ್ಯ ಸರಕಾರ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ಮುಂದಾಗಿದೆ. ಸಿದ್ದೇಶ್ವರ ಶ್ರೀಗಳ ಅಗಲಿಕೆಯ ಗೌರವಾರ್ಥ ವಿಜಯಪುರ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

Ads on article

Advertise in articles 1

advertising articles 2

Advertise under the article