ಅಹಮದಾಬಾದ್‌ನಲ್ಲಿ ಶಾರುಖ್ ಖಾನ್ ಅಭಿನಯದ ‘ಪಠಾಣ್’ ಸಿನೆಮಾಕ್ಕೆ ವಿರೋಧ; ಪೋಸ್ಟರ್‌ಗಳನ್ನು ಹ#ರಿದುಹಾಕಿದ ಬಜರಂಗದಳದ ಕಾರ್ಯಕರ್ತರು

ಅಹಮದಾಬಾದ್‌ನಲ್ಲಿ ಶಾರುಖ್ ಖಾನ್ ಅಭಿನಯದ ‘ಪಠಾಣ್’ ಸಿನೆಮಾಕ್ಕೆ ವಿರೋಧ; ಪೋಸ್ಟರ್‌ಗಳನ್ನು ಹ#ರಿದುಹಾಕಿದ ಬಜರಂಗದಳದ ಕಾರ್ಯಕರ್ತರು

ಅಹಮದಾಬಾದ್‌(Headlines Kannada): ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ ‘ಪಠಾಣ್’ ಸಿನೆಮಾಕ್ಕೆ ಆರಂಭದಿಂದಲೂ ವಿರೋಧ ವ್ಯಕ್ತವಾಗುತ್ತ ಬಂದಿದ್ದು, ಈಗ ಈ ಸಿನಿಮಾದ ಪ್ರಚಾರಕ್ಕೆ ಬಜರಂಗದಳದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಗುಜರಾತಿನ ಅಹಮದಾಬಾದ್‌ನ ಕರ್ಣಾವತಿ ಪ್ರದೇಶದ ಮಾಲ್‌ನಲ್ಲಿ ‘ಪಠಾಣ್’ ಚಿತ್ರದ ಪೋಸ್ಟರ್‌ಗಳನ್ನು ಹ#ರಿದುಹಾಕಿದ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ.

ಶಾರುಖ್‌ ಖಾನ್‌ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್‌’ ಚಿತ್ರದ ಹಾಡೊಂದಕ್ಕೆ ರಿಲೀಸ್ ಆಗುತ್ತಿದ್ದಂತೆಯೇ ಕೆಲವರು ವಿವಾದ ಸೃಷ್ಟಿಸಿದ್ದರು. ಇದಕ್ಕೆ ಮಣಿದು, ಸಿನಿಮಾ ಹಾಗೂ ಹಾಡಿನಲ್ಲಿ ಬದಲಾವಣೆಗಳನ್ನು ಮಾಡಲು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್‌ಸಿ) ಚಿತ್ರತಂಡಕ್ಕೆ ನಿರ್ದೇಶಿಸಿದೆ.

ಡಿ.12ರಂದು ಬಿಡುಗಡೆಯಾಗಿದ್ದ ಚಿತ್ರದ ‘ಬೇಷರಮ್‌ ರಂಗ್‌’ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಸಿನಿಮಾ ಜ.25ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

Ads on article

Advertise in articles 1

advertising articles 2

Advertise under the article