ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಜಯ ಸಾಧಿಸಿದ ಟೀಮ್ ಇಂಡಿಯಾ; ಮೈಕೆಲ್ ಬ್ರೇಸ್‌ವೆಲ್ ಶತಕ ವ್ಯರ್ಥ

ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಚಕ ಜಯ ಸಾಧಿಸಿದ ಟೀಮ್ ಇಂಡಿಯಾ; ಮೈಕೆಲ್ ಬ್ರೇಸ್‌ವೆಲ್ ಶತಕ ವ್ಯರ್ಥ

ಹೈದರಾಬಾದ್(Headlineskannada): ಹೈದರಾಬಾದ್​ನ ರಾಜೀವ್​ ಗಾಂಧಿ ಕ್ರಿಕೆಟ್ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 12 ರನ್'ಗಳ ಅಂತರದಿಂದ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. 

ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಟೀಂ ಇಂಡಿಯಾ ನೀಡಿದ್ದ 350 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ್ದ ಕಿವೀಸ್ 337 ರನ್ ಗಳಿಸುವ ಮೂಲಕ ಸೋಲನ್ನು ಕಂಡಿತು. ಕೊನೆಗೂ ಮೈಕೆಲ್ ಬ್ರೇಸ್‌ವೆಲ್ ಅವರ ಸ್ಫೋಟಕ ಶತಕದ ಆಟ ವ್ಯರ್ಥವಾಯಿತು.

ಇನಿಂಗ್ಸ್ ಆರಂಭಿಸಿದ ಶುಭ್​ಮನ್ ಗಿಲ್ ಮತ್ತು ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 60 ರನ್​ಗಳ ಜೊತೆಯಾಟವಾಡಿದ ಈ ಜೋಡಿಯನ್ನು ಔಟ್ ಮಾಡುವಲ್ಲಿ ಕೊನೆಗೂ ಟಿಕ್ನರ್ ಯಶಸ್ವಿಯಾದರು. 

ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿತು. ಒಂದು ಕಡೆ ವಿಕೆಟ್ ಗಳು ಬೀಳುತ್ತಿದ್ದರು ಇದನ್ನು ಲೆಕ್ಕಿಸದೆ ಆಡಿದ ಗಿಲ್ ಹೊಸ ದಾಖಲೆಯನ್ನೇ ಬರೆದರು. ಶುಭ್​ಮನ್ ಗಿಲ್ 149 ಎಸೆತಗಳನ್ನು ಎದುರಿಸಿ 19 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್ ಗಳ ನೆರವಿನಿಂದ 208 ರನ್ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಭಾರತ ಪರ ದ್ವಿಶತಕ ಸಿಡಿಸಿದ ಅತಿ ಕಿರಿಯ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು. ಭಾರತದ ಪ್ರ ಮೊಹಮ್ಮದ್ ಸಿರಾಜ್(4-46) ಯಶಸ್ವಿ ಬೌಲರ್ ಎನಿಸಿಕೊಂಡರು.


Ads on article

Advertise in articles 1

advertising articles 2

Advertise under the article