ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಯಡಿಯೂರಪ್ಪ; ಕೊಟ್ಟ ಕಾರಣವೇನು....?
ಬೆಳಗಾವಿ(Headlines Kannada): ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ನಂತರ ಪಕ್ಷದಿಂದ ದೂರವಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ನಂತರ ಬಿಜೆಪಿ ಹೈಕಮಾಂಡ್ ಕೂಡ ಯಡಿಯೂರಪ್ಪರನ್ನು ಅಷ್ಟಾಗಿ ಪರಿಗಣನೆಗೆ ತೆಗೆದುಕೊಳ್ಳದೆ ದೂರ ಇಟ್ಟಿತ್ತು. ರಯ್ಜ್ಯದಲ್ಲಿ ಬಿಜೆಪಿಯನ್ನು ದೊಡ್ಡ ಮಟ್ಟಕ್ಕೆ ತಂಡ ಅವರನ್ನು ರಾಜ್ಯದ ನಾಯಕರು ಕೂಡ ಮೂಲೆಗುಂಪು ಮಾಡಿದ್ದರು.
ಇದೀಗ ಈ ಎಲ್ಲ ಕಾರಣಗಳಿಂದ ನೊಂದಿರುವ ಯಯುಡಿಯೂರಪ್ಪ, ನನಗೀಗ 80 ವರ್ಷ, ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು CM ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ನನಗೀಗ 80 ವರ್ಷ ವಯಸ್ಸಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತಾನು ಬಯಸಿರುವುದಾಗಿ ಹೇಳಿದರು.
ಬಿಜೆಪಿ ಪಕ್ಷದ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದ ಅವರು, ಮಗ ರಾಘವೇಂದ್ರ ಸಂಸದ, ಮತ್ತೊಬ್ಬ ಮಗ ವಿಜಯೇಂದ್ರ ಕೂಡ BJP ಗಟ್ಟಿಗೊಳಿಸಲು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ತಾನೀಗ ರಾಜಕೀಯದಿಂದ ನಿವೃತ್ತಿ ಹೊಂದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಓಡಾಡುತ್ತೇನೆ. ಜೊತೆಗೆ ದೇವರು ಶಕ್ತಿ ಕೊಟ್ಟರೆ ಮುಂದಿನ ಚುನಾವಣೆವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ. ರಾಜ್ಯದಲ್ಲಿ BJPಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.