ICC ನೂತನ ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವೇಗಿ ಮೊಹಮ್ಮದ್ ಸಿರಾಜ್
ಮುಂಬೈ: ICC ನೂತನ ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಸರ್ವಶ್ರೇಷ್ಠ ಸಾಧನೆಯೊಂದಿಗೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಈಗ ನಂಬರ್ 1 ಬೌಲರ್ ಆಗಿರುವ ವೇಗಿ ಮೊಹಮ್ಮದ್ ಸಿರಾಜ್, ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅತ್ಯಾದ್ಭುತ ಪ್ರದರ್ಶನ ನೀಡಿದ್ದು, 5 ಪಂದ್ಯಗಳಿಂದ ಒಟ್ಟು 14 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ರನ್ನು ಹಿಂದಿಕ್ಕಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
ವಿಶೇಷ ಎಂದರೆ ಇದು ಮೊಹಮ್ಮದ್ ಸಿರಾಜ್ ಅವರ ಈ ವರೆಗಿನ ಸರ್ವಶ್ರೇಷ್ಠ ಸಾಧನೆ. ಅದರಲ್ಲೂ ವೇಗಿ ಜಸ್ಪ್ರೀತ್ ಬುಮ್ರಾ ಬಳಿಕ ICC ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ 1 ಎನಿಸಿಕೊಂಡ ಟೀಮ್ ಇಂಡಿಯಾ ವೇಗಿ ಎಂಬ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ.
ನೂತನ ICC ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿ ಇಲ್ಲಿದೆ ನೋಡಿ...
1.ಮೊಹಮ್ಮದ್ ಸಿರಾಜ್ (ಭಾರತ)- 729 ಅಂಕಗಳು
2.ಜೋಶ್ ಹ್ಯಾಝಲ್ವುಡ್ (ಆಸ್ಟ್ರೇಲಿಯಾ)- 727 ಅಂಕಗಳು
3. ಟ್ರೆಂಟ್ ಬೌಲ್ಟ್ (ನ್ಯೂಜಿಲೆಂಡ್)- 708 ಅಂಕಗಳು
4. ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ)- 665 ಅಂಕಗಳು
5.ರಶೀದ್ ಖಾನ್ (ಅಫ್ಘಾನಿಸ್ತಾನ್)- 659 ಅಂಕಗಳು
6. ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 665 ಅಂಕಗಳು
7. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 652 ಅಂಕಗಳು
8. ಶಹೀನ್ ಅಫ್ರಿದಿ (ಪಾಕಿಸ್ತಾನ್)- 641 ಅಂಕಗಳು
9. ಮುಸ್ತಫಿಜುರ್ ರೆಹಮಾನ್ (ಬಾಂಗ್ಲಾದೇಶ್)- 638 ಅಂಕಗಳು
10. ಮುಜೀಬ್ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 637 ಅಂಕಗಳು